ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಶಾಸಕ ಹರೀಶ್ ಪೂಂಜ ಪೋಸ್ಟ್ ಗೆ ವ್ಯಾಪಕ ಖಂಡನೆ. ಬೆಳ್ತಂಗಡಿ ಶಾಸಕರಿಗೆ ದೇಶದ ಸಂವಿಧಾನದ ಬಗ್ಗೆ ಅರಿವಿಲ್ಲ,ಇದು ಮೂರ್ಖತನದ ಪರಮಾವಧಿ- ಎಂ.ಬಿ.ಪಾಟೀಲ್.

Coastal Bulletin
ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಶಾಸಕ ಹರೀಶ್ ಪೂಂಜ ಪೋಸ್ಟ್ ಗೆ ವ್ಯಾಪಕ ಖಂಡನೆ. ಬೆಳ್ತಂಗಡಿ ಶಾಸಕರಿಗೆ ದೇಶದ ಸಂವಿಧಾನದ ಬಗ್ಗೆ ಅರಿವಿಲ್ಲ,ಇದು ಮೂರ್ಖತನದ ಪರಮಾವಧಿ- ಎಂ.ಬಿ.ಪಾಟೀಲ್.

ಬೆಳ್ತಂಗಡಿ : ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಹಿಂದೂಗಳ ಹಣ ಹಿಂದೂ ಅಭಿವೃದ್ಧಿಗೆ ಮಾತ್ರ ಬಳಸಬೇಕು. ಹಿಂದೂಗಳು ಕಟ್ಟಿದ ತೆರಿಗೆ ಹಣ ಇತರ ಧರ್ಮದ ಜನರಿಗೆ ಸೇರುವುದು ಅನ್ಯಾಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್​ ಪೂಂಜಾ ಪೋಸ್ಟ್ ಹಾಕಿದ್ದಾರೆ. ಇದಕ್ಕೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಅವರ ಪೋಸ್ಟ್‌ನ ಉದ್ದೇಶ ರಾಜ್ಯಕ್ಕೆ ಅನ್ಯಾಯ ಆಗ್ತಿದೆ ಅನ್ನೋದು ಅಲ್ಲ. ನಮ್ಮ ವಾದದಲ್ಲಿ ಸತ್ಯಾಂಶ ಇದ್ದರೆ ಹರೀಶ್ ಪೂಂಜಾ ಒಪ್ಪಿಕೊಳ್ಳಬೇಕು ಎಂದಿದ್ದಾರೆ.

ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದುಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದುಗಳಿಗೆ ಆಗುವ ಅನ್ಯಾಯ. ಹಿಂದೂಗಳ ತೆರಿಗೆ, ಹಿಂದೂಗಳ ಹಕ್ಕು. ದೇಶದಲ್ಲಿರುವ ತೆರಿಗೆ ಸಂಗ್ರಹಣದಲ್ಲಿ ಹಿಂದೂಗಳ ಪಾಲು ಎಷ್ಟು? ಇದರಲ್ಲಿ ಹಿಂದೂಗಳ ಅಭಿವೃದ್ಧಿಗೆ ಉಪಯೋಗವಾಗುತ್ತಿರುವುದು ಎಷ್ಟು? ಹಿಂದೂಗಳ ತೆರಿಗೆ ಹಿಂದುಗಳಿಗೆ ಸಲ್ಲಬೇಕು ಎಂದು ಹರೀಶ್ ಪೂಂಜಾ ಪೋಸ್ಟ್ ಮಾಡಿದ್ದಾರೆ.

ಶಾಸಕ ಹರೀಶ್ ಪೂಂಜಾ ಪೋಸ್ಟ್​ಗೆ ವ್ಯಾಪಕ‌ ಖಂಡನೆ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ಎಂ.ಬಿ ಪಾಟೀಲ್, ಇದು ಮೂರ್ಖತನದ ಪರಮಾವಧಿ. ನಮ್ಮ ದೇಶದ ಸಂವಿಧಾನ ಬೆಳ್ತಂಗಡಿ ಶಾಸಕರಿಗೆ ಗೊತ್ತಿಲ್ಲಾ ಅನಿಸುತ್ತೆ. ಶಾಸಕರಾಗೋಕೆ ಅವರು ಅರ್ಹರಿಲ್ಲ ಎಂದಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಅವರ ಪೋಸ್ಟ್‌ನ ಉದ್ದೇಶ ರಾಜ್ಯಕ್ಕೆ ಅನ್ಯಾಯ ಆಗ್ತಿದೆ

ಎನ್ನೋದು ಇಲ್ಲ. ನಮ್ಮ ವಾದದಲ್ಲಿ ಸತ್ಯಾಂಶ ಇದ್ದರೆ ಹರೀಶ್ ಪೂಂಜಾ ಒಪ್ಪಿಕೊಳ್ಳಬೇಕು. ಮೊಂಡುವಾದ ಪ್ರದರ್ಶನ ಮಾಡಬಾರದು. 10 ವರ್ಷದಿಂದ ಅದೇ ಪ್ರಮಾಣದಲ್ಲಿ ಹಣ ಬರುತ್ತಿದೆ, ರಾಜ್ಯಕ್ಕೆ ನೀಡುವ ಅನುದಾನದಲ್ಲಿ ಏನೂ ವೃದ್ಧಿಯಾಗಿಲ್ಲ.

ಧರ್ಮದ ಹೆಸರಿನಲ್ಲಿ ಅನ್ಯಾಯದ ಕೆಲಸವನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಯ ಬಂಧನ, ವಿರೋಧ ಪಕ್ಷದ ಬಂಧನ ವಾಗುತ್ತಿದೆ. ತನಿಖಾ ಸಂಸ್ಥೆಗಳು ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ. ಚಂಡೀಗಢ ಮೇಯರ್ ಚುನಾವಣೆ ಈ ಘಟನೆಗಳಿಗೆ ಸಾಕ್ಷಿ. ದೇಶದಲ್ಲಿ ಪ್ರಜಾ ಪ್ರಭುತ್ವ ಮೌಲ್ಯ ಕುಸಿಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ಹರೀಶ್ ಪೂಂಜ  ಮುಖ್ಯಮಂತ್ರಿ ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ  ಹೇಳಿಕೆ ನೀಡಿದ್ದರು. ಈ ಪ್ರಕರಣ ಕೂಡ ಭಾರಿ ವಿವಾದಕ್ಕೆ ಕಾರಣವಾಗಿತ್ತು.ಪದೇ ಪದೇ ಸಾಮರಸ್ಯ ಕೆದಡುವ ಹೇಳಿಕೆ ನೀಡುವ ಜನಪ್ರತಿನಿಧಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ.

Leave a Comment