ಬಂಟ್ವಾಳ :ಫೆ 8 ರಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ -2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಆಶಾ,ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು,ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು. ಜಲ ಜೀವನ್ ಮಿಷನ್ ನ ಬಂಟ್ವಾಳ ತಾಲೂಕಿನ ಸಮುದಾಯ ಸಂಘಟಕಿ ಗುಣವತಿಯವರು ಜಲ ಜೀವನ್ ಮಿಷನ್ ನ ಉದ್ದೇಶ ಮತ್ತು ಕಾರ್ಯಕ್ರಮದ ಬಗ್ಗೆ, ಮಹಿಳಾ ದಿನಾಚರಣೆಯ ಮಹತ್ವ ,ಮಹಿಳೆಯರ
ಸ್ವಾವಲಂಬಿ ಬದುಕಿಗೆ ಇರುವ ಹಲವಾರು ಅವಕಾಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಆರೋಗ್ಯ ಇಲಾಖೆಯ ಸಿಬ್ಬಂದಿ ಮಹಿಳೆಯರ ಆರೋಗ್ಯ ಮತ್ತು ಸುರಕ್ಷತೆ, ಮಕ್ಕಳ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷರು ಮಹಿಳೆಯರಿಗೆ ಶುಭ ಹಾರೈಸಿ, ಅಭಿನಂದಿಸಿದರು. ಜಲ ಜೀವನ್ ಮಿಷನ್ ಕಾರ್ಯಕ್ರಮವನ್ನು ಆಯೋಜಿಸಿತ್ತು.














