ಬಂಟ್ವಾಳ :ಫೆ.08 ರಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ -2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮ ಪಂಚಾಯತ್ ನಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೇರೇಪಣಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.
ಈ ತರಭೇತಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಆಶಾ ಕಾರ್ಯಕರ್ತೆಯರು, ಸ್ವ ಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಸೇರಿ ಒಟ್ಟು 39 ಮಂದಿ ಭಾಗವಹಿಸಿದ್ದರು. ಜಲ ಜೀವನ್ ಮಿಷನ್ ನ ಅನುಷ್ಠಾನ ಬೆಂಬಲ ಸಂಸ್ಥೆಯ ಸಿಬ್ಬಂದಿ ವಿಲ್ಮಾ ರವರು ಮಳೆ
ನೀರು ಕೊಯ್ಲು ಘಟಕ ಮತ್ತು ಬೂದುನೀರು ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮಪಂಚಾಯತ್ ಅಧ್ಯಕ್ಷರು ಮಹಿಳಾ ದಿನಾಚರಣೆಯ ವಿಶೇಷತೆಯ ಬಗ್ಗೆ ತಿಳಿಸಿ, ಎಲ್ಲಾ ಮಹಿಳೆಯರಿಗೆ ಹೂಗುಚ್ಛ ನೀಡಿ ಅಭಿನಂಸಿದರು. ಬಂಟ್ವಾಳ ತಾಲೂಕಿನ ಜಲ ಜೀವನ್ ಮಿಷನ್ ನ ಸಮುದಾಯ ಸಂಘಟಕರಾದ ವಿಲ್ಮಾ ರವರು ಕಾರ್ಯಕ್ರಮವನ್ನು ಆಯೊಜಿಸಿ. ಯಶಸ್ವಿಗೊಳಿಸಿದರು














