Coastal Bulletin

ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿನೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9 ರಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾಳ್ತಿಲದಲ್ಲಿ ನಡೆದಿದೆ.

ಬಾಳ್ತಿಲ ನಿವಾಸಿ ಶಿಕ್ಷಕರಾದ ಚಂದ್ರಶೇಖರ ಮತ್ತು ಸೌಮ್ಯ ಅವರ ಪುತ್ರಿ ವೈಷ್ಣವಿ (17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

ಕಲಿಕೆಯಲ್ಲಿ ಪ್ರತಿಭಾವಂತೆಯಾಗಿದ್ದ ಬಾಲಕಿ ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ ಕಾಲೇಜಿಗೆ ಹೋಗಿ ಅಲ್ಲಿಂದ ವಾಪಾಸ್ಸು

ಏನೋ ಮರೆತು ಬಂದಿರುವುದಾಗಿ ಹೇಳಿ‌ ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಿಂದ ಕುಟುಂಬ ಆಘಾತಕ್ಕೆ ಒಳಗಾಗಿದೆ.

ವೈಷ್ಣವಿ ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಿಯಾಗಿದ್ದು, ಕಲಿಕೆಯಲ್ಲಿ ಕ್ಲಾಸಿನಲ್ಲಿ ಪ್ರಥಮವಾಗಿದ್ದಳು.

Leave a Comment