ಬಂಟ್ವಾಳ :ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ಧಕಟ್ಟೆ ಇಲ್ಲಿನ 2025- 26 ನೇ ಸಾಲಿನ ವಿದ್ಯಾರ್ಥಿ ಸಂಘದ ಹಾಗೂ ಇತರ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜು. 8ರಂದು ಮಂಗಳವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರೋಟರಿ ಜಿಲ್ಲಾ ಮಾಜಿ ಅಸಿಸ್ಟೆಂಟ್ ಗವರ್ನರ್ ರೋ ರಾಘವೇಂದ್ರ ಭಟ್, ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು ಅಳವಡಿಸಿಕೊಂಡಾಗ ಸಮಾಜದಲ್ಲಿ ಉತ್ತಮ ನಾಯಕನಾಗಲೂ ಸಾಧ್ಯ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಭಾಕರ
ಪ್ರಭು ಮಾತನಾಡಿ, ವಿದ್ಯಾರ್ಥಿಗಳು ಗುರು ಹಿರಿಯರಿಗೆ ವಿಧೇಯರಾಗಿದ್ದುಕೊಂಡು ಮನೆಯಲ್ಲಿ ತಂದೆ ತಾಯಿ, ಪೋಷಕರನ್ನು ಆರೈಕೆ ಮಾಡಿಕೊಂಡು, ಮನೆಯಲ್ಲಿರುವವರನ್ನು ಮೊದಲು ಗೌರವಿಸಿಕೊಂಡು ಸಮಾಜವನ್ನು" ಗೌರವಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಉದಯಕುಮಾರ್ ಇವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿದರು.
ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಶೀನಪ್ಪ ಎನ್ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ನಾಯಕ ಪವನ್ ವಂದಿಸಿದರು. ಉಪನ್ಯಾಸಕರಾದ ಶ್ರೀ ಸಂಜಯ್ ಬಿ ಎಸ್ ಕಾರ್ಯಕ್ರಮ ನಿರೂಪಿಸಿದರು













