Coastal Bulletin

ಬಂಟ್ವಾಳ : ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸತನವನ್ನು ತರುವ ಮೂಲಕ ರಾಜ್ಯದ ಜನತೆಗೆ ಒಳಿತನ್ನು ಮಾಡುತ್ತೇನೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಪೊಳಲಿ ರಾಜರಾಜೇಶ್ವರಿ ಕ್ಷೇತ್ರಕ್ಕೆ ಸೋಮವಾರ ಬೆಳಿಗ್ಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸುನೀಲ್ ಕುಮಾರ್ ಮುಂದಿನ ಶುಕ್ರವಾರ ತಾನು ಸಚಿವನಾಗಿ ಅಧಿಕಾರ

ವಹಿಸಿಕೊಳ್ಳುವುದಕ್ಕೆ ಪೂರ್ವಭಾವಿಯಾಗಿ ರಾಜರಾಜೇಶ್ವರಿ ಭಕ್ತನಾದ ತಾನು ಇಂದು ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದೇನೆ.ಎಲ್ಲರ ಒಳಿತಿಗಾಗಿ ಕೆಲಸ ಮಾಡುತ್ತೇನೆ ಎಂದರು.

Leave a Comment