ಬಂಟ್ವಾಳ: ಇಲ್ಲಿನ ಸರ್ಕಾರಿ ನೌಕರರ ಸಂಘದ ವಿರುದ್ಧ ಐವರು ಸದಸ್ಯರು ಸ್ವಾರ್ಥ ಸಾಧನೆಗಾಗಿ ಸುಳ್ಳು ಆರೋಪ ಮಾಡಿಕೊಂಡು ಸಂಘ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಸಾಮಾಜಿಕ ಜಾಲಾತಾಣಗಳಲ್ಲಿ ಸಂಘದ ಬಗ್ಗೆ ಅವಹೇಳನ ಮಾಡುತ್ತಿದ್ದಾರೆ. ಸುಳ್ಳು ದಾಖಲ ಸೃಷ್ಟಿಸಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಬೇಕು ಎಂದು ಆರೋಪಿಸುತ್ತಿರುವ ಐವರು ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಿದರು. ಉಪತಹಶೀಲ್ದಾರ್ ನರೇಂದ್ರನಾಥ್ ಮನವಿ ಸ್ವೀಕರಿಸಿದರು.
ಸಂಘದ ಅಧ್ಯಕ್ಷ ಉಮನಾಥ ರೈ ಮೇರಾವು, ಕಾರ್ಯದರ್ಶಿ ಸಂತೋಷ್ ಕುಮಾರ್ ತುಂಬೆ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ನವೀನ್ ಪಿ.ಎಸ್., ಸಂಘದ
ಆಂತರಿಕ ಲೆಕ್ಕಪರಿಶೋಧಕ ಅಂಬಾ ಪ್ರಸಾದ್, ಕ್ರೀಡಾ ಕಾರ್ಯದರ್ಶಿ ಫ್ರಾನ್ಸಿಸ್ ಡೇಸಾ, ಉಪಹಶೀಲ್ದಾರ್ ನವೀನ್ ಬೆಂಜನಪದವು, ದಿವಾಕರ ಮುಗುಳ್ಯ, ಪ್ರಮುಖರಾದ ಯತೀಶ್, ಅನಿಲ್ ಕೆ. ಪೂಜಾರಿ, ಸೀತಾರಾಮ ಪೂಜಾರಿ, ಪುಟ್ಟರಂಗನಾಥ್ ಇದ್ದರು.















