ಬಂಟ್ವಾಳ: ಸನಾತನ ಹಿಂದೂ ಧರ್ಮದ ವಿರುದ್ಧ ಮಾತನಾಡುವವರು ಅಳಿದು ಹೋಗಲಿದ್ದು, ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ ಕಟೌಟ್ ಅಳವಡಿಸುವ ಮೂಲಕ ದೇಶ ಒಡೆಯಲು ಸಂಚು ರೂಪಿಸುತ್ತಿರುವವರ ವಿರುದ್ಧ ಸಮಸ್ತ ಹಿಂದೂ ಸಮಾಜ ಸಂಘಟಿತರಾಗಬೇಕು ಎಂದು ಸಾಧ್ವಿ ದೇವಿ ಸರಸ್ವತಿ ಹೇಳಿದ್ದಾರೆ.
ಇಲ್ಲಿನ ಬಿ.ಸಿ.ರೋಡು ಸಮೀಪದ ಬಸ್ತಿಪಡ್ಪು ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ 'ಶೌರ್ಯ ಜಾಗರಣಾ ರಥಯಾತ್ರೆ' ಪ್ರಯುಕ್ತ ಭಾನುವಾರ ಸಂಜೆ ನಡೆದ 'ಜಗೃತ ಹಿಂದೂ ಸಮಾಜೋತ್ಸವ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶೌರ್ಯ ಜಾಗರಣಾ ರಥಯಾತ್ರೆ ಸ್ವಾಗತ ಸಮಿತಿ ರಘು ಎಲ್. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರ್ ಎಸ್ ಎಸ್ ಹಿರಿಯ ಪ್ರಚಾರಕ ಸು.ರಾಮಣ್ಣ ದಿಕ್ಸೂಚಿ ಭಾಷಣ ಮಾಡಿ, 'ಶೌರ್ಯ ವಿಜ್ರಂಭಿಸಿದರೆ ಕ್ರೌರ್ಯ ನಾಶವಾಗುತ್ತದೆ' ಎಂದರು. ಒಡಿಯೂರು ಗುರುದೇವಾನಂದ ಸ್ವಾಮೀಜಿ, ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ, ಕಣಿಯೂರು ಮಹಾಬಲ ಸ್ವಾಮೀಜಿ, ವಿಶ್ವ
ಹಿಂದೂ ಪರಿಷತ್ ಕನರ್ಾಟಕ ದ.ಪ್ರಾಂತ ಕಾರ್ಯಧ್ಯಕ್ಷ ಡಾ. ಎಂ.ಬಿ.ಪುರಾಣಿಕ್, ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ ಇದ್ದರು. ವಿಶ್ವ ಹಿಂದೂ ಪರಿಷತ್ ಬಂಟ್ವಾಳ ಘಟಕ ಅಧ್ಯಕ್ಷ ವಕೀಲ ಪ್ರಸಾದ್ ಕುಮಾರ್ ರೈ ಪ್ರಾಸ್ತಾವಿಕ ಮಾತನಾಡಿದರು. ಬಿ.ಭಾಸ್ಕರ ರಾವ್ ಪ್ರೇರಣಾ ಗೀತೆ ಹಾಡಿದರು. ಸಚಿನ್ ಮೆಲ್ಕಾರ್ ವಂದಿಸಿದರು. ನವೀನ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು
ಆರಂಭದಲ್ಲಿ ನಡೆದ ಆಕರ್ಷಕೆ ಮೆರವಣಿಗೆಯಲ್ಲಿ ಆರ್ ಎಸ್ ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್, ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಸುಲೋಚನಾ ಜಿ.ಕೆ.ಭಟ್, ರಾಮದಾಸ್ ಬಂಟ್ವಾಳ್, ಬಿಜೆಪಿ ಕ್ಷೇತ್ರ್ರಾಧ್ಯಕ್ಷ ದೇವಪ್ಪ ಪೂಜಾರಿ, ನಾಗೇಶ ಕಲ್ಲಡ್ಕ ಮತ್ತಿತರರು ಪಾಲ್ಗೊಂಡರು.
















