ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾದ ಪಾಣೇರ್ ಸಂಕದಲ್ಲಿ ಬಿರುಕು, ವಾಹನ ಸವಾರರೇ ಹುಷಾರ್...

Coastal Bulletin
ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾದ ಪಾಣೇರ್ ಸಂಕದಲ್ಲಿ ಬಿರುಕು, ವಾಹನ ಸವಾರರೇ ಹುಷಾರ್...

ಬಂಟ್ವಾಳ: ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾದ ಶತಮಾನದಷ್ಟು ಹಳೆಯ (ಪಾಣೇರ್ ಸಂಕ )ಪಾಣೆಮಂಗಳೂರು ಉಕ್ಕಿನ ಸೇತುವೆಯ ಮಧ್ಯಭಾಗದಲ್ಲಿ ಸಣ್ಣದಾದ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸವಾರಿ ಮಾಡುವಂತೆ ಸ್ಥಳೀಯರು ತಿಳಿಸಿದ್ದಾರೆ.

ಅಕ್ಕರಂಗಡಿ ಕಡೆಯಿಂದ ಬರುವಾಗ ಸುಮಾರು ನಾಲ್ಕು ಪಿಲ್ಲರ್ ಗಳ ಪೈಕಿ ಬಿರುಕು ಕಾಣಿಸಿಕೊಂಡಿದೆ.

ಡಾಮರು ಎದ್ದು ಹೋಗಿದೆ, ಸಣ್ಣ ಗುಂಡಿಯಾಗಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.ಆದರೆ ಆಯುಷ್ಯ ಮುಗಿದಿರುವ ಸೇತುವೆಯಲ್ಲಿ ಬಿರುಕು ಕಂಡರೂ ಆಶ್ಚರ್ಯವಲ್ಲ.ಈ ಹಿಂದೆ ಬಿಸಿರೋಡು ಕಡೆಯಿಂದ ಬರುವ ಗೂಡಿನಬಳಿಯ ಭಾಗದಲ್ಲಿ ಸೇತುವೆ ಕುಸಿತ ಕಂಡು ಬಂದಿತ್ತು.ಹಾಗಾಗಿ ನೂತನ ಸೇತುವೆ ಆ ಸಂದರ್ಭದಲ್ಲಿ ನಿರ್ಮಾಣ ಮಾಡಲಾಗಿತ್ತು.

ನೂತನ ಸೇತುವೆ ‌ನಿರ್ಮಾಣವಾಗುವವರೆಗೆ ಈ ಸೇತುವೆ ಯಾವುದೇ ಘನ ವಾಹನಗಳ ಸಂಚಾರಕ್ಕೆ ಅವಕಾಶ

ನೀಡಿರಲಿಲ್ಲ. ಆ ಬಳಿಕ ಕುಸಿತ ಕಂಡ ಭಾಗದಲ್ಲಿ ಇಲಾಖೆ ರಿಪೇರಿ ಕಾರ್ಯ ಮಾಡಿತ್ತು.ಇದೀಗ ಬಸ್ ಸಹಿತ ಅನೇಕ ಘನ ವಾಹನಗಳ ಸಂಚಾರ ನಡೆಸುತ್ತಿದ್ದವು.

ಆದರೆ ಇಲಾಖೆ ಅವಾಗಿನಿಂದಲೇ ಘನ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ ಎಂಬ ನಾಮಫಲಕವನ್ನು ಅಳವಡಿಸಿ ಎಚ್ಚರಿಕೆಯನ್ನು ನೀಡಿದ್ದು,ಅಪಾಯದ ಬಗ್ಗೆ ಮುನ್ಸೂಚನೆ ನೀಡಿತ್ತು.

 ಈ ಬಗ್ಗೆ ಸ್ಥಳೀಯರು ಕೂಡಲೇ ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.ಮತ್ತು ಕೆಲ ಹೊತ್ತಿನ ತನಕ ಸೇತುವೆಯಲ್ಲಿ ನಿಂತುಕೊಂಡು ವಾಹನಸವಾರರಿಗೆ ನಿಧಾನವಾಗಿ ಚಲಿಸುವಂತೆ ಕೋರಿದ್ದಾರೆ.

Leave a Comment