ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಬಂಟ್ವಾಳ ಆಯೋಜಿಸಿರುವ ಮತಗಳ್ಳತನದ ವಿರುದ್ಧ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಬೃಹತ್ ಪಂಜಿನ ಮೆರವಣಿಗೆಯು ಬಿ.ಸಿ.ರೋಡ್ ಮಿನಿ ವಿಧಾನಸೌಧದ ಮುಂಭಾಗ ಅ.10ರಂದು ಶುಕ್ರವಾರ ನಡೆಯಲಿದೆ.
ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದಿಂದ ನಾರಾಯಣ ಗುರು ಸರ್ಕಲ್ ವರೆಗೆ ಸಾಗಿ, ನಂತರ ಬಿ.ಸಿ.ರೋಡ್ ಮಿನಿ ವಿಧಾನಸೌಧದ
ಎದುರು ಸಾರ್ವಜನಿಕ ಸಭೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸಚಿವ ಸಂತೋಷ್ ಲಾಡ್ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.














