Coastal Bulletin

ಬಂಟ್ವಾಳ :ತಾಲ್ಲೂಕಿನ ಸರಪಾಡಿ ಯುವಕ ಮಂಡಲ ವತಿಯಿಂದ ವಾಲಿಬಾಲ್ ಆಟಗಾರ ದಿವಂಗತ ಜನಾರ್ಧನ ಭಂಡಾರಿ ಸ್ಮರಣಾರ್ಥ ಭಾನುವಾರ ನಡೆದ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟಕ್ಕೆ ಶ್ರೀ ಶರಭೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಚಾಲನೆ ನೀಡಿದರು.

ಇಲ್ಲಿನ ನ ಸರಪಾಡಿ ಯುವಕ ಮಂಡಲ ವತಿಯಿಂದ ವಾಲಿಬಾಲ್ ಆಟಗಾರ ದಿವಂಗತ ಜನಾರ್ಧನ ಭಂಡಾರಿ ಸ್ಮರಣಾರ್ಥ ಭಾನುವಾರ ನಡೆದ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟಕ್ಕೆ ಶ್ರೀ ಶರಭೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಚಾಲನೆ ನೀಡಿದರು. ಆಡಳಿತ ಮೊಕ್ತೇಸರ ವಿಠಲ್ ಎಂ.ಆರುಮುಡಿ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪದ್ಮಶೇಖರ್ ಜೈನ್ ಮತ್ತು ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಸುಪ್ರೀತ್ ಆಳ್ವ ಅವರು ಕ್ರೀಡಾಂಗಣ ಉದ್ಘಾಟಿಸಿದರು. ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಟ ಅಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ,

ನಿವೃತ್ತ ಶಿಕ್ಷಕ ನರಸಿಂಹ ಐತಾಳ್ ಅರಮನೆ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ದಂತ ವೈದ್ಯ ಡಾ. ಬಾಲಚಂದ್ರ ಶೆಟ್ಟಿ ಮೀಯಾರು, ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಮೊಡಂಕಾಪು ಕಾರ್ಮೆಲ್ ಕಾಲೇಜಿನ ಉಪನ್ಯಾಸಕ ಸುರೇಶ್ ನಂದೊಟ್ಟು, ಕೂರಿಯಾಳ ಶ್ರೀ ದುರ್ಗಾ ಸೇವಾ ಸಮಿತಿಯ ಅಧ್ಯಕ್ಷ ಅಮರನಾಥ ಶೆಟ್ಟಿ ಕೂರಿಯಾಳ, ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಧಾಕೃಷ್ಣ ರೈ ಕೊಟ್ಟುಂಜ, ಗೌರವಾಧ್ಯಕ್ಷ ಎಸ್.ಪಿ.ಸರಪಾಡಿ ಇದ್ದರು. ಯುವಕ ಮಂಡಲ ಅಧ್ಯಕ್ಷ ಸಂತೋಷ್ ಶೆಟ್ಟಿ ಪಡ್ಡಾಯಿಬೆಟ್ಟು ಸ್ವಾಗತಿಸಿ ವಂದಿಸಿದರು.  

Leave a Comment