ತುಂಬೆ: ಗ್ರಾ ಪಂ ನಲ್ಲಿ ಕಟ್ಟಡ ಕಾರ್ಮಿಕರಿಗೆ ಆರ್ ಪಿ ಎಲ್ ತರಬೇತಿ,ಪ್ರಮಾಣೀಕರಣ ಮತ್ತು ಕಿಟ್ ವಿತರಣೆ.

Coastal Bulletin
ತುಂಬೆ: ಗ್ರಾ ಪಂ ನಲ್ಲಿ ಕಟ್ಟಡ ಕಾರ್ಮಿಕರಿಗೆ ಆರ್ ಪಿ ಎಲ್ ತರಬೇತಿ,ಪ್ರಮಾಣೀಕರಣ ಮತ್ತು ಕಿಟ್ ವಿತರಣೆ.

ಬಂಟ್ವಾಳ :ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ತುಂಬೆ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರಿಗೆ ಆರ್ ಪಿ ಎಲ್ ತರಬೇತಿ, ಪ್ರಮಾಣೀಕರಣ ಮತ್ತು ಕಿಟ್ ವಿತರಣಾ ಶಿಬಿರ ಕಾರ್ಯಕ್ರಮವನ್ನು ತುಂಬೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಡಿ. 8ರಂದು ಸೋಮವಾರ ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಕೇಶವ ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ತುಂಬೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ಸಾಲಿಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಬಿ ತುಂಬೆ, ತುಂಬೆ ಗ್ರಾಮ ಪಂಚಾಯತ್ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ

ಚಂದ್ರಕಲಾ ಜಿ, ಪಂಚಾಯತ್ ಸಿಬ್ಬಂದಿಗಳು ಹಾಗೂ ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು. ಕಟ್ಟಡ ಕಾರ್ಮಿಕ ಇಲಾಖೆ ಸಂಪನ್ಮೂಲ ವ್ಯಕ್ತಿ ಅನಿತಾ ಇವರು ಕಾರ್ಮಿಕರಿಗೆ ತರಬೇತಿ ನೀಡಿದರು. ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಿಸಲಾಯಿತು. ಕಟ್ಟಡ ಕಾರ್ಮಿಕ ಸಂಪನ್ಮೂಲ ವ್ಯಕ್ತಿ ಪ್ರತೀಕ್ ಪಂಡಿತ್ ರವರು ಸ್ವಾಗತಿಸಿ ವಂದಿಸಿದರು.

Leave a Comment