Coastal Bulletin

ಮಂಗಳೂರು: ಕನ್ನಡದ ಖ್ಯಾತ ಲೇಖಕಿ ನಾಡೋಜ ಸಾರಾ ಅಬೂಬಕ್ಕರ್‌ ನಿಧನರಾಗಿದ್ದಾರೆ. 87 ವರ್ಷದ ಸಾರಾ ಅಬೂಬಕರ್ ಅನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಕನ್ನಡದ ಪ್ರಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರು ಜೂನ್ 30, 1936 ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಜನಿಸಿದರು. ವಿವಾಹದ ನಂತರ ಮಂಗಳೂರಿನ ಹ್ಯಾಟ್ ಹಿಲ್ ಬಳಿ

ವಾಸವಾಗಿದ್ದರು.

ಚಂದ್ರಗಿರಿ ತೀರದಲ್ಲಿ ಕಾದಂಬರಿ ಮೂಲಕ ಪ್ರಸಿದ್ಧಿಯಾಗಿದ್ದ ಸಾರಾ ಅಬೂಬಕ್ಕರ್‌ ಅನೇಕ ಕೃತಿ ರಚಿಸಿ ಖ್ಯಾತರಾಗಿದ್ದರು. ಮಂಗಳವಾರ ರಾತ್ರಿ 8 ಗಂಟೆಗೆ ಮಂಗಳೂರಿನ ಬಂದರ್ ಝೀನತ್ ಬಕ್ಷ್ ಮಸೀದಿ ಆವರಣದ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

Leave a Comment