ಮಂಚಿ ಕೊಳ್ನಾಡು ಪ್ರೌಢಶಾಲೆ: ರಾಜ್ಯ ಮಟ್ಟದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ.

Coastal Bulletin
ಮಂಚಿ ಕೊಳ್ನಾಡು ಪ್ರೌಢಶಾಲೆ: ರಾಜ್ಯ ಮಟ್ಟದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ.

ಬಂಟ್ವಾಳ :ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಇಲ್ಲಿನ ವಿದ್ಯಾರ್ಥಿಗಳು 2023 - 24 ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶವನ್ನು ಪಡೆದಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಬೆಂಗಳೂರು ಇವರು ನಡೆಸುವ ರಾಜ್ಯಮಟ್ಟದ ಪರೀಕ್ಷೆ ಇದಾಗಿದೆ. ಮಂಚಿ ಕೊಳ್ನಾಡು ಪ್ರೌಢಶಾಲೆಯ ಒಟ್ಟು 35 ವಿದ್ಯಾರ್ಥಿಗಳು ಭಾಗವಹಿಸಿದ್ದು 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಾಲಾ ಮುಖ್ಯೋಪಾಧ್ಯಾಯರಾದ  ಸುಶೀಲಾ ವಿಟ್ಲ ಪ್ರಮಾಣ ಪತ್ರವನ್ನು ವಿತರಿಸಿ ಮಾತನಾಡಿ, "ಶಾಲಾ ಪಠ್ಯ ವಿಷಯದ ಜೊತೆ ಜೊತೆಗೆ ಇಂತಹ ಪಠ್ಯಪೂರಕ ಪರೀಕ್ಷೆಗಳು

ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹಾಗೂ ಸೃಜನಶೀಲತೆಯನ್ನು ಮೂಡಿಸುತ್ತದೆ" ಎಂದರು. ಡ್ರಾಯಿಂಗ್ ಗ್ರೇಡ್ ಪರೀಕ್ಷೆಯ ಮಾರ್ಗದರ್ಶಕರಾದ ಕಲಾವಿದ ತಾರಾನಾಥ ಕೈರಂಗಳ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Leave a Comment