ಬಂಟ್ವಾಳ: ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ನಡೆದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆಯ ಕೊನೆಯ ದಿನ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಬೇಟಿ ಪ್ರಾರ್ಥನೆ ಸಲ್ಲಿಸಿದರು. ಕ್ಷೇತ್ರದ ವತಿಯಿಂದ ಪ್ರಸಾದ ನೀಡಿ ಗೌರವಿಸಲಾಯಿತು.
ದೇವಸ್ಥಾನದ ಎಲ್ಲಾ ಕಾರ್ಯಗಳು ಯಶಸ್ವಿಯಾಗಿ ನೆರವೇರಲಿ. ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಸದಾ ನನ್ನಿಂದಾದ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕರು ಹೇಳಿದರು.
ಜಿಲ್ಲಾ ಪಂಚಾಯತು ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರಾ,ಕ್ಷೇತ್ರದ ಆಡಳಿತ ಮೊಕ್ತೇಸರ ಶ್ರೀಪಾದ ಪಾಂಗಣ್ಣಾಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು,
ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೊರಗ ಶೆಟ್ಟಿ, ಪ್ರಶಾಂತ್ ಕೋಟ್ಯಾನ್ ಮೇಗಿನಮನೆ, ಇರ್ವತ್ತೂರು ಗ್ರಾಮ ಪಂಚಾಯತು ಸದಸ್ಯ ದಯಾನಂದ ಎಸ್.ಎರ್ಮೆನಾಡು, ಸತೀಶ್ ಕರ್ಕೆರಾ ಕಯ್ಯಾಬೆ ಮತ್ತಿತರರಿದ್ದರು.
ರಾತ್ರಿ ಶ್ರೀ ದೇವರ ಮಹೋತ್ಸವ, ದೈವಗಳ ಗಗ್ಗರ ಸೇವೆ, ದೇವರು ಹಾಗೂ ದೈವಗಳ ಭೇಟಿ, ಓಕುಳಿ ಉತ್ಸವ ವಿದ್ಯುಕ್ತವಾಗಿ ಸಂಪನ್ನಗೊಂಡಿತು.














