ಬಂಟ್ವಾಳ: ಮುರುಘೇಂದ್ರ ಮಿತ್ರ ಮಂಡಳಿ ಪುಂಜಾಲಕಟ್ಟೆ ಇಲ್ಲಿ ಕರಾಟೆ ತರಬೇತಿ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು
ಪಿಲಾತ್ತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ ಕರಾಟೆ ತರಗತಿಗೆ ಚಾಲನೆ ನೀಡಿದರು. ಈ ಸಂದರ್ಭ ದಲ್ಲಿ 2022 ರ ಸಾಧಕ ವಿಧ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ ಶುಭಹಾರೈಸಿದರು. ಗ್ರಾ.ಪಂ.ಸದಸ್ಯೆ ಪುಷ್ಪಲತಾ ಮೋಹನ್, ಮುರುಘೇಂದ್ರ ಮಿತ್ರ ಮಂಡಳಿಯ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಪುಂಜಾಲಕಟ್ಟೆ ಪೊಲೀಸ್ ಠಾಣೆ ಉಪನಿರೀಕ್ಷಕ ಸುತೇಶ್ ಕೆ ಪಿ, ಕರಾಟೆ
ಸಂಸ್ಥೆಯ ಮುಖ್ಯ ಶಿಕ್ಷಕ ಶಾಜು ಮುಲಾವನ, ಶಿಕ್ಷಕರಾದ ಅಶೋಕ ಆಚಾರ್ಯ, ಜೋಕಿಂ ಪಿಂಟೊ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಸಂಸ್ಥೆಯ ಕರಾಟೆ ಶಿಕ್ಷಕರುಗಳಾದ ಮಿಥುನ್ ರಾಜ್, ದೇವರಾಜ್, ನೋಣಯ್ಯ ಹಾಗೂ ವಿಧ್ಯಾರ್ಥಿಗಳು, ಪೋಷಕರು ಹಾಗೂ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಸದಸ್ಯರು, ಮುರುಘೇಂದ್ರ ಮಿತ್ರ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಪೂಜಾ ಕೆ.ಎಸ್. ಸ್ವಾಗತಿಸಿ ಸಿಂಚನ ಎಂ.ಡಿ. ವಂದಿಸಿದರು. ಕರಾಟೆ ಶಿಕ್ಷಕ ಅಶೋಕ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.














