ಬಂಟ್ವಾಳ : ಶಾಂತಿ , ನೆಮ್ಮದಿಯ ಜೊತೆಗೆ ಬಂಟ್ವಾಳ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುವ ಕಾರಣಕ್ಕಾಗಿ ಬಂಟ್ವಾಳ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಶಾಸಕರ ಆಯ್ಕೆಯಾಗಬೇಕು. ಈ ನಿಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಕ್ಷೇತ್ರದ ಜನರು ಸಹಕಾರ ನೀಡಿ ಗೆಲ್ಲಿಸಿ ಎಂದು ರಾಜೇಶ್ ನಾಯ್ಕ್ ಮನವಿ ಮಾಡಿದರು.
ಅವರು ನಾವೂರು ಶಕ್ತಿ ಕೇಂದ್ರದ ಗಂಗಾಧರ ಪೂಜಾರಿ ಅವರ ಮನೆಯಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಮಾತನಾಡಿದರು.
ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಕೊರೊನಾ ಅವಧಿಯಲ್ಲಿ ಸಾವನ್ನಪ್ಪಿದ ಬಂಟ್ವಾಳದ ಮಹಿಳೆಯ ಅಂತ್ಯಕ್ರಿಯೆಗೆ ಜಾಗನೀಡದ ಸಮಯದಲ್ಲಿ ಒಡ್ಡೂರಿನ ಮನೆಯ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡಲು ವ್ಯವಸ್ಥೆ ಮಾಡಿ ಎಂದು ಜಿಲ್ಲಾಡಳಿತಕ್ಕೆ ತಿಳಿಸಿದ್ದು ರಾಜ್ಯದ ಏಕೈಕ
ಶಾಸಕ ರಾಜೇಶ್ ನಾಯ್ಕ್ . ಅಂತಹ ವ್ಯಕ್ತಿಯನ್ನು ಮತ್ತೆ ಶಾಸಕರಾಗಿ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ನಾವೂರ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಹರೀಶ್ ಪ್ರಭು, ಗ್ರಾ.ಪಂ ಸದಸ್ಯರಾದ ವಿಜಯ ನಾವೂರ, ಜನಾರ್ದನ, ತ್ರಿವೇಣಿ, ಲೀಲಾ ಮತ್ತಿತ್ತರು ಉಪಸ್ಥಿತರಿದ್ದರು.














