ಬಂಟ್ವಾಳ :ಮಾಜಿ ಸಚಿವರಾದ ಬಿ.ರಮಾನಾಥ ರೈ ರವರು ಇಂದು ತಮ್ಮ ಮತ ಕ್ಷೇತ್ರದಲ್ಲಿ ಮತ ಚಲಾಯಿಸುವ ಮೊದಲು ಬಂಟ್ವಾಳ ತಿರುಮಲ ಶ್ರೀ ವೆಂಕರಮಣ ದೇವಸ್ಥಾನ ಹಾಗೂ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕುಟುಂಬ ಸಮೇತರಾಗಿ ಕಳ್ಳಿಗೆ ಗ್ರಾಮದ ತೊಡಂಬಿಲ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.















