ಬಂಟ್ವಾಳ: ಪಂಚಾಯಿತಿ ರಾಜ್ ವ್ಯವಸ್ಥೆಯಲ್ಲಿ ಚುನಾಯಿತ ಜನಪ್ರತಿನಿಧಿಗಳು ಮತ್ತು ಪರಾಜಿತ ಅಭ್ಯರ್ಥಿಗಳು ನಿರಂತರವಾಗಿ ಜನ ಸಾಮಾನ್ಯರ ಧ್ವನಿಯಾಗಿ ಸರ್ಕಾರದ ಲೋಪ ದೋಷಗಳನ್ನು ಎತ್ತಿ ಹಿಡಿದಾಗ ಅದರ ಬಗ್ಗೆ ವಿಧಾನಪರಿಷತ್ತಿನಲ್ಲಿ ನಾನು ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಹೇಳಿದ್ದಾರೆ.
ಇಲ್ಲಿನ ವಾಮದಪದವು ಸಮೀಪದ ಕರಿಮಲೆ ಸಭಾಂಗಣದಲ್ಲಿ ಮಂಗಳವಾರ ನಡೆದ ಸಂಗಬೆಟ್ಟು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಪ್ರತಿನಿಧಿಗಳ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಮಹಿಳೆಯರು ಮತ್ತು ಸಾಮಾನ್ಯ ಜನತೆಗೆ ಸ್ಥಳೀಯಾಡಳಿತದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಕೊಡುಗೆ ನೀಡಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪಂಚಾಯಿತಿ ರಾಜ್ ಸಂಘಟನೆ
ಜಿಲ್ಲಾ ಸಂಚಾಲಕ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ರಾಜೇಂದ್ರ, ಪ್ರಮುಖರಾದ ಬಿ. ಪದ್ಮಶೇಖರ ಜೈನ್, ಅಮ್ಮು ರೈ , ಪಿಯೂಸ್ ಎಲ್.ರೊಡ್ರಿಗಸ್, ಅಬ್ಬಾಸ್ ಅಲಿ, ಚಂದ್ರಪ್ರಕಾಶ್ ಶೆಟ್ಟಿ, ಸುದರ್ಶನ ಜೈನ್, ಕೆ.ಮಾಯಿಲಪ್ಪ ಸಾಲ್ಯಾನ್, ಲಾರೆನ್ಸ್ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸ್ವಾಗತಿಸಿ, ತಿಮ್ಮಪ್ಪ ಪೂಜಾರಿ ಕುಕ್ಕಿಪಾಡಿ ವಂದಿಸಿದರು. ವಲಯಾಧ್ಯಕ್ಷ ನವೀನಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
















