ಬಂಟ್ವಾಳ: ತಾಲ್ಲೂಕಿನ ಮೇರಮಜಲು ತೇವುಕಾಡು ವ್ಯಾಗ್ರೇಶ್ವರಿ ಭಜನಾ ಮಂದಿರದ ಸಭಾಂಗಣದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಿದರು.
ದೇಶದಾದ್ಯಂತ ಲಸಿಕೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು, ಆರಂಭದಲ್ಲಿ ಲಸಿಕೆ ಬೇಡ ಎಂದವರೂ ಬಳಿಕ ಗುಟ್ಟಾಗಿ ಲಸಿಕೆ ಸ್ವೀಕರಿಸಿದ್ದಾರೆ. ದೇಶದಲ್ಲಿ ಈಗಾಗಲೇ ಒಟ್ಟು 35 ಕೋಟಿ ಜನರು ಲಸಿಕೆ ಹಾಕಿಸಿಕೊಂಡಿದ್ದು, ಮುಂದಿನ ನವೆಂಬರ್ ತಿಂಗಳೊಳಗೆ ಎಲ್ಲರಿಗೂ ಲಸಿಕೆ ಸಿಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದ್ದಾರೆ. ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಮೇರಮಜಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೇವುಕಾಡು ವ್ಯಾಗ್ರೇಶ್ವರಿ ಭಜನಾ ಮಂದಿರದ ಸಭಾಂಗಣದಲ್ಲಿ ಕಾರ್ಮಿಕರಿಗೆ ಶುಕ್ರವಾರ ಆಹಾರದ ಕಿಟ್ ವಿತರಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ
ಜಯಶ್ರೀ ಕರ್ಕೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಎಲೆಕ್ಟ್ರಿಕಲ್ಸ್ ಮತ್ತು ಇಂಡಸ್ಟ್ರೀಸ್ ಸಂಸ್ಥೆ ನಿಗಮ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಶುಭ ಹಾರೈಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರವೀಂದ್ರ ಕಂಬಳಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಗಣೇಶ್ ಸುವರ್ಣ ತುಂಬೆ , ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೊಟ್ಟಿಂಜ ಪದ್ಮನಾಭ ಶೆಟ್ಟಿ ಎಪಿಎಂಸಿ ಉಪಾಧ್ಯಕ್ಷ ವಿಠಲ ಸಾಲ್ಯಾನ್, ಸಹಾಯಕ ಕಾರ್ಮಿಕ ಆಯುಕ್ತ ನಾಗರಾಜ್, ಕಾರ್ಮಿಕ ಅಧಿಕಾರಿ ವಿಲ್ಮಾ, ಪಿಡಿಒ ರಶ್ಮಿ ಆರ್., ಪ್ರಮುಖರಾದ ಮನೋಜ್ ಆಚಾರ್ಯ ನಾಣ್ಯ , ಸತೀಶ್ ನಾಯ್ಕ್ , ದಿನೇಶ್
ಶೆಟ್ಟಿ ಕೊಟ್ಟಿಂಜ ಮತ್ತಿತರರು ಇದ್ದರು.
---















