ಮೈಸೂರು :ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಆಸ್ಪತ್ರೆಯ ವಾರ್ಡ್ ನಲ್ಲಿ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ವಾರ್ಡ್ ಕಿಟಕಿ ಗ್ರಿಲ್ ಕಿತ್ತು ಒಳ ನುಗ್ಗಿ 30 ವರ್ಷದ ಮಹಿಳೆಯ ಮೇಲೆ ಅಮಾನುಷ ಕೃತ್ಯ ಎಸಗಿದ್ದಾನೆ.
ಆರೋಪಿ ಕಾಮುಕ ರಾತ್ರಿಯ ವೇಳೆ ಕಿಟಕಿ ಮೂಲಕ ನುಗ್ಗಿ ಅತ್ಯಾಚಾರ ಎಸಗುತ್ತಿದ್ದ ಎಂದು ವೃದ್ಧೆಯೊಬ್ಬರು ವಾರದ ಹಿಂದೆಯೇ ಮಾಹಿತಿ ನೀಡಿದರೂ ಆಸ್ಪತ್ರೆಯವರು ಕ್ರಮ ಕೈಗೊಂಡಿರಲಿಲ್ಲ.
ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಕೆ.ಆರ್. ಆಸ್ಪತ್ರೆಯ ವೈದ್ಯರು ಯತ್ನಿಸುತ್ತಿದ್ದಾರೆ ಎಂಬ ವಿಚಾರ ಬಹಿರಂಗವಾಗುತ್ತಿದ್ದಂತೆ, ಮಾನವ ಹಕ್ಕುಗಳ ಸೇವಾ ಸಮಿತಿಯಿಂದ ಪ್ರಕರಣ ಬೆಳಕಿಗೆ ಬಂದಿದೆ.















