ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಕಲ್ಲಗುಡ್ಡೆ ಎಂಬಲ್ಲಿ ಶುಕ್ರವಾರ ತಡರಾತ್ರಿ ಆವರಣಗೋಡೆ ಕುಸಿದು ಮನೆಗೆ ಹಾನಿಯಾದ ಬಗ್ಗೆ ವರದಿಯಾಗಿದೆ.
ಇಲ್ಲಿನ ಪುರಸಭಾ ವ್ಯಾಪ್ತಿಯ ಕಲ್ಲಗುಡ್ಡೆ ಎಂಬಲ್ಲಿ ಶುಕ್ರವಾರ ತಡರಾತ್ರಿ ಆವರಣಗೋಡೆ ಕುಸಿದು ಮನೆಗೆ ಹಾನಿಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಇಲ್ಲಿನ ನಿವಾಸಿ ಸೋಮನಾಥ ಕುಲಾಲ್ ಎಂಬವರು ನವೀನ್ ಎಂಬವರಿಗೆ ಬಾಡಿಗೆಗೆ ನೀಡಿದ್ದ ಈ ಮನೆಯ ಒಂದು ಭಾಗ ಸಂಪೂರ್ಣ ಹಾನಿಗೀಡಾಗಿದೆ. ಇದರಿಂದಾಗಿ ಮನೆಯ ಗೋಡೆ ಕುಸಿದು ಬಿದ್ದು ರೂ 5ಲಕ್ಷ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಈ ಮನೆಯಲ್ಲಿದ್ದ
ನವೀನ
ಅವರ ಪತ್ನಿ ಪವಿತ್ರ ಮತ್ತು ಪುತ್ರಿ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಮಾತ್ರವಲ್ಲದೆ ಫ್ಯಾನ್ ಮತ್ತಿತರ ಎಲೆಕ್ಟ್ರೋನಿಕ್ಸ್ ವಸ್ತುಗಳು, ಮನೆ ಹೊರಗೆ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ ಎಂದು ದೂರಿಕೊಂಡಿದ್ದಾರೆ. ಗ್ರಾಮಕರಣಿಕ ಪ್ರದೀಪ್ ಸಹಿತ ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಪುರಸಭಾ ಸದಸ್ಯ ಗಂಗಾಧರ್ ಪೂಜಾರಿ, ಪ್ರಮುಖರಾದ ರಮನಾಥ ಪೈ ಮತ್ತಿತರರು ಶನಿವಾರ ಬೆಳಿಗ್ಗೆ ಭೇಟಿ ನೀಡಿದ್ದಾರೆ.















