ತುಂಬೆ: ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ  ಸ್ಪರ್ಧೆ ಹಾಗೂ ಸಂಪ್ರದಾಯ ಸಂಭ್ರಮ. ಪ್ರತಿಭೆಗೆ ವೇದಿಕೆ ಕಲ್ಪಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರ : ದಿನೇಶ ಶೆಟ್ಟಿ ಅಳಿಕೆ.

Coastal Bulletin
ತುಂಬೆ: ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ  ಸ್ಪರ್ಧೆ ಹಾಗೂ ಸಂಪ್ರದಾಯ ಸಂಭ್ರಮ. ಪ್ರತಿಭೆಗೆ ವೇದಿಕೆ ಕಲ್ಪಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರ : ದಿನೇಶ ಶೆಟ್ಟಿ ಅಳಿಕೆ.

ಬಂಟ್ವಾಳ: ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ (ರಿ) ನಡೆಸುತ್ತಿರುವ ತುಂಬೆ ಪದವಿ ಪೂರ್ವ ಕಾಲೇಜಿನ ವತಿಯಿಂದ ಅಂತರ್ ತರಗತಿ ಮಟ್ಟದ ಪ್ರತಿಭಾ ಸ್ಪರ್ಧೆ ಹಾಗೂ ಸಂಪ್ರದಾಯ ದಿನದ ಸಂಭ್ರಮವು ಸೆ. 9ರಂದು ಕಾಲೇಜಿನ ಶಬನಾ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಹೂವಿನ ಕುಂಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿದ ಕಾಲೇಜಿನ ಪ್ರಾಚಾರ್ಯರಾದ ದಿನೇಶ ಶೆಟ್ಟಿ ಅಳಿಕೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ವಿವಿಧ ಪ್ರತಿಭೆಗಳನ್ನು ಗುರುತಿಸಿ, ಅವುಗಳನ್ನು ಹೊರತಂದು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲ ಒಂದು ವಿಶೇಷ ಪ್ರತಿಭೆ ಇರುತ್ತದೆ. ಕೆಲವರು ವಿದ್ಯಾಭ್ಯಾಸದಲ್ಲಿ ಉತ್ತಮರಾಗಿದ್ದರೆ, ಇನ್ನು ಕೆಲವರು ಕ್ರೀಡೆ, ಸಂಗೀತ, ನೃತ್ಯ, ಚಿತ್ರಕಲೆ, ಸಾಹಿತ್ಯ, ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುತ್ತಾರೆ. ಇಂತಹ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರ ಎಂದು ಅವರು ಹೇಳಿದರು.

ತೀರ್ಪುಗಾರರಾಗಿ ಆಗಮಿಸಿದ್ದ ತುಂಬೆ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಪದ್ಮನಾಭ ಉಪಾಧ್ಯಾಯ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಇಂತಹ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ. ಸ್ಪರ್ಧೆಯಲ್ಲಿ ಗೆಲುವು-ಸೋಲಿಗಿಂತಲೂ ಭಾಗವಹಿಸುವ ಮನೋಭಾವ ಹಾಗೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಆತ್ಮವಿಶ್ವಾಸ ಮುಖ್ಯವಾಗಿದೆ ಎಂದು ಹೇಳಿದರು.

ಇನ್ನೋರ್ವ ತೀರ್ಪುಗಾರರಾದ

ತುಂಬೆ ಪ್ರೌಢಶಾಲೆಯ ಸಹ ಶಿಕ್ಷಕಿ ಅಮೃತಾ, ತುಂಬೆ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಕವಿತಾ, ದೈಹಿಕ ಶಿಕ್ಷಣ ನಿರ್ದೇಶಕ ಸಾಯಿರಾಂ ಜೆ. ನಾಯಕ್, ಆಂಗ್ಲ ಭಾಷಾ ಉಪನ್ಯಾಸಕ ಚಂದ್ರಶೇಖರ ಶೆಟ್ಟಿ, ಕಾಲೇಜಿನ ವಿದ್ಯಾರ್ಥಿ ಮಂತ್ರಿಪರಿಷತ್ತಿನ ಅಧ್ಯಕ್ಷ ಮೊಹಮ್ಮದ್ ನಿಹಾದ್ ಹಾಗೂ ಕಾರ್ಯದರ್ಶಿ ಫಾತಿಮತುಲ್ ಅಲೀಮತ್ ಸನಾಮ ಮತ್ತು ವಿರೋಧ ಪಕ್ಷದ ನಾಯಕ ಮೊಹಮ್ಮದ್ ಅಮೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಕನ್ನಡ ಉಪನ್ಯಾಸಕ ಡಿ.ಬಿ. ಅಬ್ದುಲ್ ರಹಿಮಾನ್ ಸ್ವಾಗತಿಸಿ ,ಇತಿಹಾಸ ಉಪನ್ಯಾಸಕ ಶರತ್ ಆಳ್ವ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಅಂತರ್ ತರಗತಿ ಮಟ್ಟದ ಪ್ರತಿಭಾ ಸ್ಪರ್ಧೆಯಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸಿದ್ದವು. ದ್ವಿತೀಯ ವಿಜ್ಞಾನ ವಿಭಾಗದ ‘ವೈಬ್ ಹಂಟರ್ಸ್’ ತಂಡ ಪ್ರಥಮ ಸ್ಥಾನ ಪಡೆದುಕೊಂಡರೆ, ದ್ವಿತೀಯ ವಾಣಿಜ್ಯ ವಿಭಾಗದ ‘ಟ್ಯಾಲೆಂಟ್ ಜೋರ್’ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Leave a Comment