ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿ. ಇದರ 15 ನೇ ಶಾಖೆ ಜ.14 ರಂದು ಉಪ್ಪಿನಂಗಡಿಯ ಕೋಟೆ ಕೆಂಪಿಮಜಲು ಗೌರಿ ಕಾಂಪ್ಲೆಕ್ಸ್ ನ ಒಂದನೇ ಮಹಡಿಯ ಕೊಠಡಿಯಲ್ಲಿ ಶುಭರಂಭಗೊಳ್ಳಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಸುರೇಶ್ ಕುಲಾಲ್ ತಿಳಿಸಿದ್ದಾರೆ.
ಅವರು ಬ್ಯಾಂಕ್ ನ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ವಿಷಯ ತಿಳಿಸಿದರು. ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಅವರು ದೀಪಪ್ರಜ್ವಲನೆ ನಡೆಸಿ ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಲಿದ್ದಾರೆ.
ಪುತ್ತೂರು ಶಾಸಕ ಸಂಜೀವ ಮಠಂದೂರು ಬ್ಯಾಂಕ್ ನ ಉದ್ಘಾಟನೆ ನಡೆಸಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭದ್ರತಾ ಕೋಠಡಿ ಉದ್ಘಾಟಿಸಲಿದ್ದಾರೆ. ಬ್ಯಾಂಕ್ ನ ಅಧ್ಯಕ್ಷ ಸುರೇಶ್ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಲಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಇವರು ಕಂಪ್ಯೂಟರ್ ಉದ್ಘಾಟನೆ ನಡೆಸಲಿರುವರು. ಸಹಕಾರ ಸಂಘಗಳ ಜಂಟಿ ನಿರ್ದೇಶಕ ಡಾ!ಜಿ.ಉಮೇಶ್ ಸೇಫ್ ಲಾಕರ್ ಉದ್ಘಾಟನೆ ನಡೆಸುವರು. ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕ ಡಾ!ಜಿ. ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಇವರ ಜೊತೆಗೆ ಅನೇಕ
ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿರುವರು.
ಮುಂದಿನ ದಿನಗಳಲ್ಲಿ ಇನ್ನು ಆರು ಶಾಖೆಗಳನ್ನು ಆರಂಭಿಸಲು ಆಡಳಿತ ಮಂಡಳಿ ತೀರ್ಮಾನಿಸಿದೆ. ಗ್ರಾಹಕರ ಸೇವೆಯ ಅನುಕೂಲಕ್ಕಾಗಿ ತ್ವರಿತ ಸಾಲ ಸೌಲಭ್ಯ ಜಾರಿಗೊಳಿಸಲಾಗಿದೆ.
ಗ್ರಾಹಕರ ಅನುಕೂಲಕ್ಕಾಗಿ ಮತ್ತು ಸಹಕಾರಿ ಹಿತದೃಷ್ಟಿಯಿಂದ ಆನ್ ಲೈನ್ ಸೇವೆ ಪ್ರಾರಂಭಿಸುವ ಯೋಜನೆ ಸಿದ್ದಗೊಂಡಿದೆ. ಸದಸ್ಯರ ಅನುಕೂಲಕ್ಕಾಗಿ ಇ.ಸ್ಟ್ಯಾಂಪ್ ಸೇವೆಯನ್ನು ನೀಡಲಾಗುತ್ತಿದೆ.ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಉನ್ನತ ಶಿಕ್ಷಣಕ್ಕಾಗಿ ಸಾಲ ಸೌಲಭ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಸದಸ್ಯರಿಗೆ ಸೇಫ್ ಡೆಪಾಸಿಟ್ ಲಾಕರ್ ಸೌಲಭ್ಯವನ್ನು ನೀಡಲಾಗುತ್ತಿದೆ. ಸದಸ್ಯರ ಗಂಭೀರ ಕಾಯಿಲೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಪದ್ಮನಾಭ ವಿಟ್ಲ ಜನಾರ್ದನ ಬೊಂಡಾಲ, ಸುರೇಶ್ ಎನ್, ರಮೇಶ್ ಸಾಲಿಯಾನ್, ವಾಮನ ಟೈಲರ್, ರಮೇಶ್ ಕೈಕುಂಜೆ, ಜಗ್ನಿವಾಸ ಗೌಡ, ಬ್ಯಾಂಕ್ ನ ಸಿ.ಒ.ಬೋಜ ಮೂಲ್ಯ ಉಪಸ್ಥಿತರಿದ್ದರು.













