ಬಂಟ್ವಾಳ :ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಪ್ರಯುಕ್ತ ಪೂರ್ವತಯಾರಿ ಅಂಗವಾಗಿ ಭಾನುವಾರ ಡಿಸೆಂಬರ್ 12ರಂದು ಬೆಳಿಗ್ಗೆ 9.30ರಿಂದ 12.30ರ ವರೆಗೆ ಮಾತೃಸಮಾವೇಶ ನಡೆಯಲಿದೆ. ಕಳ್ಳಿಗೆ, ತುಂಬೆ, ಬಿ.ಮೂಡ ಮತ್ತು ನಡು ಗ್ರಾಮ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಮಾತೆಯರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಪ್ರತಿ ಗ್ರಾಮಗಳಲ್ಲಿ ಮಾತೆಯರು ಮನೆ ಮನೆ ಸಂಪರ್ಕಿಸಿ ಸಮಾವೇಶದ ಯಶಸ್ಸಿಗಾಗಿ ದುಡಿಯುತ್ತಿದ್ದಾರೆ.














