ಕಾರ್ಕಳ : ಕಾರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಕಾರ್ಕಳ ಬಜಗೋಳಿ ಸಮೀಪ ನಡೆದಿದೆ.
ಭೀಕರ ಅಪಘಾತದ ಪರಿಣಾಮ ಆಂಧ್ರ ಮೂಲದ ಪತಿ-ಪತ್ನಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಬೆಂಗಳೂರಿನಲ್ಲಿ ವಾಸವಾಗಿದ್ದ ಆಂಧ್ರದ ಕುಟುಂಬ ಧರ್ಮಸ್ಥಳಕ್ಕೆ
ಭೇಟಿ ನೀಡಿ ಅಲ್ಲಿಂದ ಶೃಂಗೇರಿಗೆ ಹೋಗುತ್ತಿದ್ದಾಗ ನೆಲ್ಲಿಕಾರು ಸಮೀಪ ಅಪಘಾತ ನಡೆದಿದೆ.ಮೂವರ ಮೃತದೇಹಗಳನ್ನು ಸಾರ್ವಜನಿಕರು ಸೇರಿ ಹೊರ ತೆಗೆದಿದ್ದಾರೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.















