Coastal Bulletin

ಮಂಗಳೂರು; ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಸುಳ್ಯದಿಂದ ಬೆಂಗಳೂರಿಗೆ ಆಗಮಿಸಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಹಿಂದೆ ಬಂಧಿತರಾದ ಇಬ್ಬರು ಆರೋಪಿಗಳ ಮಾಹಿತಿ ಮೇರೆಗೆ ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ತೀರ ವಿಚಾರಣೆಗೊಳಪಡಿಸಲಾಗಿದೆ.

ಪ್ರವೀಣ್ ಹತ್ಯೆ ನಂತರ ಬೆಂಗಳೂರಿಗೆ ಬಂದು ಆರೋಪಿಗಳು ತಲೆಮರೆಸಿಕೊಂಡಿದ್ದರು ಎಂದು ಹೇಳಲಾಗಿದೆ. ಇಬ್ಬರನ್ನೂ ಸುಳ್ಯಕ್ಕೆ ಕರೆತರಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.  ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ

ಪ್ರಕರಣವನ್ನ ರಾಷ್ಟ್ರೀಯ ತನಿಖಾದಳಕ್ಕೆ ಕೊಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಕೇಂದ್ರಕ್ಕೆ ಪತ್ರ ಬರೆಯುವಂತೆ ಸೂಚಿಸ್ತೇನೆ ಅಂದಿದ್ದರು. ಸದ್ಯದಲ್ಲೇ ಈ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

Leave a Comment