Coastal Bulletin

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಸ್ಪರ್ಶ ಕಲಾ ಮಂದಿರದಲ್ಲಿ ಪುತ್ತೂರು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ಇದೇ 12ರಂದು ಸಂಜೆ 4ಗಂಟೆಗೆ 'ನೃತ್ಯಧಾರ ' ಮತ್ತು ಕಲಾನಯನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಕಲಾ ಕೇಂದ್ರದ ಸಂಚಾಲಕ ಉದಯ ವೆಂಕಟೇಶ್ ಭಟ್ ತಿಳಿಸಿದ್ದಾರೆ

ಇಲ್ಲಿನ ಬಿ.ಸಿ.ರೋಡಿನಲ್ಲಿ ಗುರುವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಯಕ್ಷಗಾನ ರಂಗದ ಖ್ಯಾತ ಹಾಸ್ಯಗಾರ ದಿವಂಗತ ನಯನ ಕುಮಾರ್ ಇವರ ಸ್ಮರಣಾರ್ಥ ಕಲಾ ನಯನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ನೃತ್ಯಗುರು ವಿದ್ವಾನ್ ಉಳ್ಳಾಲ ಮೋಹನ್ ಕುಮಾರ್ ಇವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದರು.

ಇದೇ ವೇಳೆ ಪುತ್ತೂರು ಕಲಾವಿದ ವಿಘ್ನೇಶ್ ವಿಶ್ವಕರ್ಮ ದಂಪತಿಗೆ ಸನ್ಮಾನ,

ವಿದುಷಿ ರೋಹಿಣಿ ಉದಯ್ ಇವರಿಂದ ನವಗೃಹ ನೃತ್ಯರೂಪಕ ನಡೆಯಲಿದೆ ಎಂದರು. ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ ಜೈನ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಚಾಲನೆ ನೀಡುವರು. ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಮತ್ತಿತರ ಗಣ್ಯರು ಭಾಗವಹಿಸವರು ಎಂದರು. ಸುದ್ದಿಗೋಷ್ಠಿಯಲ್ಲಿ ಕೇಂದ್ರದ ಖಜಾಂಚಿ ಜಯಲಕ್ಷ್ಮೀ, ಸದಸ್ಯೆ ರೂಪಕಲಾ ಇದ್ದರು. 

Leave a Comment