ಬಂಟ್ವಾಳ :ಫೆ.10ರಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ -2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಡಿಪು ಅಂಗನವಾಡಿಯಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೇರೇಪಣಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.
ಈ ತರಭೇತಿಯಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು, ಸೇರಿ ಒಟ್ಟು 21 ಮಂದಿ ಭಾಗವಹಿಸಿದ್ದರು. ಜಲ ಜೀವನ್ ಮಿಷನ್ ನ ಅನುಷ್ಠಾನ ಬೆಂಬಲ ಸಂಸ್ಥೆಯ
ಸಿಬ್ಬಂದಿ ಗುಣವತಿಯವರು ಜಲಜೀವನ್ ಯೋಜನೆಯ ಉದ್ದೇಶ ಮತ್ತು ಮಳೆ ನೀರು ಕೊಯ್ಲು ಘಟಕದ ಬಗ್ಗೆ ಮಾಹಿತಿ ನೀಡಿದರು. ಅನುಷ್ಠಾನ ಬೆಂಬಲ ಸಂಸ್ಥೆಯ ಹೆಚ್ ಆರ್ ಡಿ ಚರಣ್ ರಾಜ್ ಬೂದುನೀರು ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.
.














