ಬಂಟ್ವಾಳ :ತುಂಬೆ ಪ. ಪೂ. ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ.ಯಲ್ಲಿ 2024ರ ವಾರ್ಷಿಕ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಹಾಜರಾದ 22 ವಿದ್ಯಾರ್ಥಿಗಳು ಉತ್ತೀರ್ಣಗೊಂಡು 100% ಫಲಿತಾಂಶವನ್ನು ಸಾಧಿಸಲಾಗಿದೆ. ಅಮಿತ್ ಶುಕ್ಲಾ 573 ಅಂಕ ಗಳಿಸಿ ಪ್ರಥಮ ಸ್ಥಾನಿಯಾಗಿದ್ದಾನೆ.
ವಿಜ್ಞಾನ ವಿಭಾಗದಲ್ಲಿ ಹಾಜರಾದ 51 ವಿದ್ಯಾರ್ಥಿಗಳಲ್ಲಿ 50 ವಿದ್ಯಾರ್ಥಿಗಳು ಉತ್ತೀರ್ಣಗೊಂಡು 98% ಫಲಿತಾಂಶ ದಾಖಲಾಗಿದೆ. ಸಂಜನಾ 575 ಅಂಕ ಪಡೆದು ಪ್ರಥಮ ಸ್ಥಾನಿಯಾಗಿದ್ದಾಳೆ.
ವಾಣಿಜ್ಯ ವಿಭಾಗದಲ್ಲಿ ಹಾಜರಾದ 63 ವಿದ್ಯಾರ್ಥಿಗಳಲ್ಲಿ 62 ವಿದ್ಯಾರ್ಥಿಗಳು ಉತ್ತೀರ್ಣಗೊಂಡು 98% ಫಲಿತಾಂಶ ಸಾಧಿಸಲಾಗಿದೆ.
ಪ್ರಸನ್ನ ಕುಮಾರ್ 554 ಅಂಕ ಪಡೆದು ಪ್ರಥಮ ಸ್ಥಾನಿಯಾಗಿದ್ದಾನೆ.
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‍ನಲ್ಲಿ ಉತ್ತೀರ್ಣರಾಗಿರುವುದು ಗ್ರಾಮೀಣ ಪ್ರದೇಶದ ಈ ಕಾಲೇಜಿನ ಸಾಧನೆಯಾಗಿದೆ. 90 ಮಂದಿ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.









