ಪೊಳಲಿ :ರಾಜ್ಯ ಸರ್ಕಾರದ ವಿರುದ್ಧ ಬಿ ಜೆ ಪಿ ಯಿಂದ ಬೃಹತ್ ಪ್ರತಿಭಟನಾ ಸಭೆ. ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ, ರಾಜ್ಯ ಸರ್ಕಾರ ದಿವಾಳಿ: ಹರಿಕೃಷ್ಣ ಬಂಟ್ವಾಳ್.

Coastal Bulletin
ಪೊಳಲಿ :ರಾಜ್ಯ ಸರ್ಕಾರದ ವಿರುದ್ಧ ಬಿ ಜೆ ಪಿ ಯಿಂದ ಬೃಹತ್ ಪ್ರತಿಭಟನಾ ಸಭೆ. ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ, ರಾಜ್ಯ ಸರ್ಕಾರ ದಿವಾಳಿ: ಹರಿಕೃಷ್ಣ ಬಂಟ್ವಾಳ್.

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕರಿಯಂಗಳ ಶಕ್ತಿ ಕೇಂದ್ರದ ವತಿಯಿಂದ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪೊಳಲಿ ಗ್ರಾಮ ಪಂಚಾಯತ್ ಕಚೇರಿ ಎದುರು ಬೃಹತ್ ಪ್ರತಿಭಟನಾ ಸಭೆ ನಡೆಯಿತು.

ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಎಲ್ಲರಿಗೂ ಉಚಿತ ಎಂದು ಹೇಳಿ ಜನರನ್ನು ಮರಳು ಮಾಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರ ಇಂದು ಆರ್ಥಿಕವಾಗಿ ದಿವಾಳಿಯಾಗಿದೆ. ಬಸ್‌ಗಳಿಗೆ ಡೀಸೆಲ್ ಹಾಕಲೂ ಸಾಧ್ಯವಾಗದ ದುಸ್ಥಿತಿ ನಿರ್ಮಾಣವಾಗಿದೆ. ತಾಯಂದಿರೇ, ಧರ್ಮಕ್ಕೆ ನೀಡುವ ಹಣದಿಂದ ಜೀವನ ನಡೆಸಲು ಸಾಧ್ಯವೇ? ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು

ಖಚಿತ ಎಂದು ಹೇಳಿದರು.

ಪ್ರತಿಭಟನೆಯ ಅಂಗವಾಗಿ ಪೊಳಲಿ ಬಸ್ ನಿಲ್ದಾಣದಿಂದ ಗ್ರಾಮ ಪಂಚಾಯತ್ ಕಚೇರಿವರೆಗೆ ಪಾದಯಾತ್ರೆ ನಡೆಯಿತು. ಬಳಿಕ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ವೆಂಕಟೇಶ್ ನಾವಡ ಪೊಳಲಿ, ರಶ್ಮಿತ್ ಶೆಟ್ಟಿ, ಜೆಡಿಎಸ್ ಮುಖಂಡ ಡಿ .ಎ. ಅಬೂಬಕ್ಕರ್ ಅಮ್ಮುಂಜೆ,  ದೇವಪ್ಪ ಪೂಜಾರಿ, ಯಶವಂತ ಪೊಳಲಿ, ಲೋಕೇಶ್ ಭರಣಿ, ಚಂದ್ರವತಿ, ಚಂದ್ರಶೇಖರ ಶೆಟ್ಟಿ, ಸುಕೇಶ್ ಶೆಟ್ಟಿ, ಕಾರ್ತಿಕ್ ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು

Leave a Comment