ಬೆಂಗಳೂರು: ಕೊಲೆ ಪ್ರಕರಣವೊಂದರಲ್ಲಿ ಮೈಸೂರು ಪೊಲೀಸರು ಮಂಗಳವಾರ ಸ್ಯಾಂಡಲ್‌ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಬಂಧಿಸಿದ್ದಾರೆ.
ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೆಜ್ ಮಾಡಿದ್ದ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬವನ ಕೊಲೆ ಪ್ರಕರಣದಲ್ಲಿ ಬಂಧನವಾಗಿದೆ ಎನ್ನಲಾಗಿದೆ.
ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿಯನ್ನು ಶನಿವಾರ ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆ ತಂದು 24 ಗಂಟೆ ನಿರಂತರ ಚಿತ್ರ ಹಿಂಸೆ ನೀಡಿದ್ದಾರೆ ಎನ್ನಲಾಗಿದೆ.ದರ್ಶನ್ ರವರ ಸ್ನೇಹಿತ ಉದ್ಯಮಿ, ವಿನಯ್‌ಗೆ ಸೇರಿದ ಆರ್‌ಆರ್ ನಗರದದ ಗೋಡೌನ್‌ಗೆ ರೇಣುಕಾಸ್ವಾಮಿಯನ್ನು ಕರೆ ತಂದು ಅಲ್ಲಿ ಮಾರಾಣಾಂತಿಕ
ಹಲ್ಲೆ ನಡೆಸಿದ್ದಾರೆ. ರೇಣುಕಾಸ್ವಾಮಿಯ ಮೂಗು, ಬಾಯಿ, ದವಡೆ ಕತ್ತರಿಸಿ ವಿಕೃತಿ ಮೆರೆದು ಸುಮ್ಮನಹಳ್ಳಿ ಬಳಿಯ ಸತ್ವ ಅನುಗ್ರಹ ಅಪಾರ್ಟ್‌ಮೆಂಟ್ ಮುಂಭಾಗದಲ್ಲಿರುವ ರಾಜಕಾಲುವೆಗೆ ಎಸೆದಿದ್ದರು.
ಪವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಜೊತೆ ಸಂಪರ್ಕ ಸಾಧಿಸಲು ಹುಡುಗಿ ಹೆಸರಿನಲ್ಲಿ ಫೇಕ್ ಖಾತೆಯನ್ನು ದರ್ಶನ್ ತಂಡ ತೆರೆದಿತ್ತು. ಈ ಖಾತೆಯ ಮೂಲಕ ರೇಣುಕಾಸ್ವಾಮಿಯ ಜೊತೆ ಸಂವಹನ ಮಾಡಲಾಗಿತ್ತು ಎಂದು ತಿಳಿದುಬಂದಿದೆ.









