ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಇದೀಗ ರೆಡ್ ಅಲರ್ಟ್ ತೆಗೆದು ಆರೆಂಜ್ ಅಲರ್ಟ್ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ ಶಿಕ್ಷಣ ಸಂಸ್ಥೆಗಳು ಜು.12ರಿಂದ ಕಾರ್ಯನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ತಿಳಿಸಿದ್ದಾರೆ. ಏನಾದರೂ ಸಮಸ್ಯೆಗಳಿದ್ದರೆ ಶಿಕ್ಷಣ ಸಂಸ್ಥೆಗಳ ಮೇಲಾಧಿಕಾರಿಗಳ ಒಪ್ಪಿಗೆ ಪಡೆದು ನಿರ್ಧಾರ ಕೈಗೊಳ್ಳುಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















