ಬಂಟ್ವಾಳ :ತುಂಬೆ ಬಿ ಎ ವಿದ್ಯಾಸಂಸ್ಥೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವು ಜು 11ರಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿದ್ಯಾಸಂಸ್ಥೆಯ ಕನ್ನಡ ಅಧ್ಯಾಪಕರಾದ ಶ್ರೀಯುತ ರಮೇಶ್ ಜುಲೈ 11 ರಂದು ಇಡೀ ವಿಶ್ವದಾದ್ಯಂತ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. 1989 ರಂದು ವಿಶ್ವದ ಜನ ಸಂಖ್ಯೆ 5 ಶತಕೋಟಿ ತಲುಪಿದ ಸಂದರ್ಭದಲ್ಲಿ ಈ ದಿನವನ್ನು ವಿಶ್ವ ಜನಸಂಖ್ಯಾ ದಿನ ಎಂದು ಆಚರಿಸುವಂತೆ ವಿಶ್ವ ಸಂಸ್ಥೆಯು ಘೋಷಿಸಿತು. ಈ ಜಗತ್ತು ಒಂದು ಶತಕೋಟಿ ಜನಸಂಖ್ಯೆಯನ್ನು ತಲುಪಲು ಸುಮಾರು ಲಕ್ಷಾಂತರ ವರ್ಷಗಳೇ ತಲುಪಿದವು. ತದನಂತರದಲ್ಲಿ ಈ ಜನಸಂಖ್ಯೆ ಇನ್ನೂರು ವರ್ಷದಲ್ಲಿ ಐದು ಶತಕೋಟಿಯನ್ನು ತಲುಪಿದವು. ಅಷ್ಟು ವೇಗದಲ್ಲಿ ಜನಸಂಖ್ಯೆ ಏರಿಕೆ ತೀವ್ರಗತಿಯನ್ನು ಪಡೆಯಿತು. ಈ ಜನಸಂಖ್ಯೆ ದರವು ಅತ್ಯಂತ ವೇಗದಲ್ಲಿ ಏರಿಕೆಯಾಗುವುದರಿಂದ ಅದರ ಸಮಸ್ಯೆಗಳೇನು ಮತ್ತು ಅದು ಪರಿಸರದ ಮೇಲೆ ಉಂಟುಮಾಡುವ ಪರಿಣಾಮ ಅದೇ ರೀತಿ ವಿಶ್ವ ಜನಸಂಖ್ಯಾ ದಿನಾಚರಣೆಯ ಮಹತ್ವವನ್ನು ತಿಳಿಸುವ ಮೂಲಕ ಕಾರ್ಯಕ್ರಮಕ್ಕೆ ಶುಭವನ್ನು ಕೋರಿದರು.
ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿ/ವಿದ್ಯಾರ್ಥಿನೀಯರು ಉಪಸ್ಥಿತರಿದ್ದರು. ಎಂಟನೆಯ ತರಗತಿಯ ವಿದ್ಯಾರ್ಥಿಗಳು ಸಭಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವಿದ್ಯಾಸಂಸ್ಥೆಯ ವಿಜ್ಞಾನ ಶಿಕ್ಷಕಿಯವರಾದ ಶ್ರೀಮತಿ ಶ್ರುತಿಯವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
******
ಬಂಟ್ವಾಳ : ತುಂಬೆ ಬಿ ಎ ವಿದ್ಯಾಸಂಸ್ಥೆಯಲ್ಲಿ
ಪ್ರಸ್ತುತ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಹಿಂದಿ ಸಂಘದ ಮೊದಲ ಸಭಾ ಕಾರ್ಯಕ್ರಮವು ಜು 07ರಂದು ಸೋಮವಾರ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮಕ್ಕೆ ತುಂಬೆ ವಿದ್ಯಾಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ವಿದ್ಯಾ ಕೆ., ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹಿಂದಿ ಸಂಘದ ಮಹತ್ವದ ಬಗ್ಗೆ ತಿಳಿಸುವ ಮೂಲಕ ಹಿಂದಿ ಸಂಘವು ಸದಾ ಕಾರ್ಯ ಚಟುವಟಿಕೆಯಿಂದ ಕೂಡಿದ್ದು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವುದಕ್ಕೆ ಇದೊಂದು ರಹದಾರಿಯಾಗಿ ಪರಿಣಮಿಸಲಿ ಎಂದು ಹೇಳುವ ಮೂಲಕ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.
ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಮಲ್ಲಿಕಾ ಶೆಟ್ಟಿಯವರು ಉಪಸ್ಥಿತರಿದ್ದು ಈ ಒಂದು ಶುಭ ಕಾರ್ಯಕ್ರಮಕ್ಕೆ ಶುಭವನ್ನು ಕೋರಿದರು. ಹಿಂದಿ ಸಂಘದ ನಿರ್ದೇಶಕರಾದ ಶ್ರೀಯುತ ರಘುಪತಿ ಭಟ್ ಇವರು ವಿದ್ಯಾರ್ಥಿಗಳಿಗೆ ಹಿಂದಿ ಸಂಘ ಮತ್ತು ಹಿಂದಿ ಭಾಷೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಈ ವಿಶೇಷ ಕಾರ್ಯಕ್ರಮದಲ್ಲಿ ಹಿಂದಿ ಶಿಕ್ಷಕಿಯವರಾದ ಶ್ರೀಮತಿ ಪ್ರತಿಮಾ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ- ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಹತ್ತನೆಯ ತರಗತಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನಡೆಸಿಕೊಟ್ಟರು.














