ಪುಂಜಾಲಕಟ್ಟೆ: ಬ್ರಹ್ಮಶ್ರೀ ನಾರಾಯಣ ಗುರು ವಸತಿ ಶಾಲೆಗೆ ರೂ 18 ಕೋಟಿ ವೆಚ್ಚದ ನೂತನ ಕಟ್ಟಡ ನಿರ್ಮಾಣ. ವಿದ್ಯಾರ್ಥಿಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಗೊಳಿಸಲು ಶಾಸಕ ರಾಜೇಶ್ ನಾಯ್ಕ್ ಸೂಚನೆ.

Coastal Bulletin
ಪುಂಜಾಲಕಟ್ಟೆ: ಬ್ರಹ್ಮಶ್ರೀ ನಾರಾಯಣ ಗುರು ವಸತಿ ಶಾಲೆಗೆ ರೂ 18 ಕೋಟಿ ವೆಚ್ಚದ ನೂತನ ಕಟ್ಟಡ ನಿರ್ಮಾಣ. ವಿದ್ಯಾರ್ಥಿಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಗೊಳಿಸಲು ಶಾಸಕ ರಾಜೇಶ್ ನಾಯ್ಕ್ ಸೂಚನೆ.

ಬಂಟ್ವಾಳ: ಜಿಲ್ಲೆಗೆ ಮಂಜೂರಾದ ಏಕೈಕ ಬ್ರಹ್ಮಶ್ರೀ ನಾರಾಯಣ ಗುರು ವಸತಿ ಶಾಲೆಗೆ ರೂ 18 ಕೋಟಿ ವೆಚ್ಚದಲ್ಲಿ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳನ್ನು ಬಾಡಿಗೆ ಕಟ್ಟಡದಿಂದ ಇಲ್ಲಿಗೆ ಸ್ಥಳಾಂತರಿಸುವಂತೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದ ಬಳಿಕ ವಿದ್ಯಾರ್ಥಿಗಳನ್ನು ಸ್ಥಳಾಂತರಗೊಳಿಸಲು ಅಧಿಕಾರಿಗಳಿಗೆ ಅವರು ಸೂಚಿಸಿದರು.

ಇದೇ ವೇಳೆ ಮೇಲ್ದರ್ಜೆಗೇರಿಸಲಾದ ಪುಂಜಾಲಕಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಮಾರು ರೂ. 12 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡವನ್ನು ಅವರು ವೀಕ್ಷಿಸಿದರು. 

 ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕಿನ ಗಡಿ ಭಾಗದಲ್ಲಿರುವ ಈ ಆರೋಗ್ಯ ಕೇಂದ್ರ ಮೇಲ್ದಜರ್ೆಗೇರಿಸಲು ಸ್ಥಳೀಯ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ಥಳೀಯರು ಕಳೆದ ಹಲವು ವರ್ಷಗಳಿಂದ ಆಗ್ರಹಿಸಿದ್ದರು. 

ಪಿಲಾತಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ

ಶಾರದಾ, ಕಾವಳಮೂಡೂರು ಗ್ರಾ.ಪಂ.ಅಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ, ಸದಸ್ಯರಾದ ಹಷರ್ಿಣಿ ಪುಷ್ಪಾನಂದ, ಕಾಂತಪ್ಪ ಕರ್ಕೆರ, ಪ್ರಮುಖರಾದ ಸುದರ್ಶನ್ ಬಜ, ಸಂತೋಷ್ ಕುಮಾರ್ ಬೆಟ್ಟು, ಪುರುಷೋತ್ತಮ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಕಮಂಗಿಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್, ಪ್ರಾಂಶುಪಾಲ ಸಂತೋಷ್ ಸನಿಲ್, ಆರೋಗ್ಯಾಧಿಕಾರಿ ಡಾ.ಅಶೋಕ್ ರೈ, ವೈದ್ಯಾಧಿಕಾರಿ ಡಾ. ರಿತೇಶ್ ಶೆಟ್ಟಿ, ಮತ್ತಿತರರು ಇದ್ದರು

Leave a Comment