ಬಂಟ್ವಾಳ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬಂಟ್ವಾಳದಲ್ಲಿ ಅಮೃತಭಾರತಿಗೆ ಗಾನನುಡಿಯ ದೀವಿಗೆ ಕಾರ್ಯಕ್ರಮವು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ನೇತೃತ್ವದಲ್ಲಿ ಬ್ರಹ್ಮರಕೊಟ್ಲುವಿನಲ್ಲಿರುವ ಬಂಟವಾಳದ ಬಂಟರ ಭವನದಲ್ಲಿ ಆ. 13ರಂದು ನಡೆಯಲಿದೆ.
ಬಿ.ಸಿ.ರೋಡಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು, ಸ್ವಾತಂತ್ರ್ಯದ ಅಮೃತೋತ್ಸವವನ್ನು ಸ್ಮರಣೀಯವಾಗಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಪೂರ್ವಭಾವಿಯಾಗಿ ಬೆಳಗ್ಗೆ 9.30ಕ್ಕೆ ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಬಂಟರ ಭವನದವರೆಗೆ ವಾಹನ ಜಾಥಾ ನಡೆಯಲಿದೆ. 10.30ರಿಂದ ಸ್ವಾತಂತ್ರ್ಯ ಹೋರಾಟದಲ್ಲಿ ಕರಾವಳಿಯ ಕಣಗಳು ಎಂಬ ವಿಷಯದಲ್ಲಿ ಪತ್ರಕರ್ತ
ಶ್ರೀಕಾಂತ್ ಶೆಟ್ಟಿ ಉಪನ್ಯಾಸ ನೀಡಲಿದ್ದಾರೆ. ಬಳಿಕ ಜಗದೀಶ್ ಆಚಾರ್ಯ ಪುತ್ತೂರು ಮತ್ತು ಬಳಗದಿಂದ ದೇಶಭಕ್ತಿ ಗೀತೆ ಗಾಯನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮ ಪಕ್ಷಾತೀತವಾಗಿ ನಡೆಯಲಿದೆ ಎಂದು ಅವರು ಹೇಳಿದರು.
ಬುಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

















