Coastal Bulletin

ಬಂಟ್ವಾಳ: ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ 17 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಆ.12 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 9 ರಿಂದ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.

ಪೊಳಲಿ ಸುಬ್ರಹ್ಮಣ್ಯ ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿದ್ದು ಮಧ್ಯಾಹ್ನ  12 ಗಂಟೆಗೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಸಾಧ್ವಿ ಮಾತಾನಂದಮಯಿ ಪ್ರವಚನ ನೀಡಲಿದ್ದಾರೆ.

ಮಧ್ಯಾಹ್ನ 1 ರಿಂದ ಅನ್ನದಾನ, 3 ರಿಂದ ಭಜನೆ ಸಂಜೆ 6 ಕ್ಕೆ ಕಲಶ ವಿಸರ್ಜನೆ ನಡೆಯಲಿದೆ ಎಂದು ಸಮಿತಿಯ ಕಾರ್ಯದರ್ಶಿ ಕೆ.ಕೃಷ್ಣಕುಮಾರ್ ಪೂಂಜ ತಿಳಿಸಿದ್ದಾರೆ.

Leave a Comment