ಬಂಟ್ವಾಳ :ತಾಲೂಕಿನ ಕಳ್ಳಿಗೆ :ಗ್ರಾಮ ಪಂಚಾಯತ್ ನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆ.11 ರಂದು ಶುಕ್ರವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಕೊಟ್ಟಾರಿ ಮಾಡಂಗೆ ಹಾಗೂ ಉಪಾಧ್ಯಕ್ಷರಾಗಿ ವಾರಿಜ ರಮೇಶ್ ಚಂದ್ರಿಗೆ ಇವರು ಆಯ್ಕೆಯಾಗಿದ್ದಾರೆ. ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರು.
ಕಳ್ಳಿಗೆ ಗ್ರಾಮ ಪಂಚಾಯತ್ ಒಟ್ಟು 11 ಸದಸ್ಯ ಬಲ ವನ್ನು ಹೊಂದಿದ್ದು,
6 ಮಂದಿ ಬಿಜೆಪಿ ಹಾಗೂ 5 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಒಳಗೊಂಡಿದೆ.















