ಬಂಟ್ವಾಳ :ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ, ಕಿನ್ನಿಬೆಟ್ಟು ಆಮ್ಟಾಡಿ ಶಾಲೆಯಲ್ಲಿ ಸಾಂಪ್ರದಾಯಿಕ ಆಟಿ ಕೂಟವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಆರತಿ ಅಮೀನ್ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಆಟಿ ತಿಂಗಳ ಮಹತ್ವ, ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಆಚರಣೆಗಳ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.
ಪೋಷಕರು ಹಾಗೂ ಶಿಕ್ಷಕರು ಆಟಿ ತಿಂಗಳ ವಿಶೇಷವಾದ ಸುಮಾರು 32 ಬಗೆಯ ಸಾಂಪ್ರದಾಯಿಕ ತಿಂಡಿ-ತಿನಿಸುಗಳನ್ನು ತಯಾರಿಸಿ ತಂದು ಪ್ರದರ್ಶಿಸಿದರು. ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಬಳಿಕ ನಡೆದ
ಸಹಭೋಜನ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಲೋಕೇಶ್ ಕುಲಾಲ್,ವಿದ್ಯಾಭಿಮಾನಿಯಾದ ಶ್ರೀ ವಿಠಲ ಕೆ ಎಂ ಕೆಂಪುಗುಡ್ಡೆ, ಪೋಷಕರು ಹಾಗೂ ಹಳೇ ವಿದ್ಯಾರ್ಥಿಗಳಾದ ಶ್ರೀ ಹರಿ ಪ್ರಸಾದ್, ಶ್ರೀ ಪ್ರವೀಣ್ ಶ್ರೀಮತಿ ದಿವ್ಯಾ ಮತ್ತು ಶ್ರೀಮತಿ ಅಶ್ವಿತ ಅವರು ಭಾಗವಹಿಸಿ ಸಹಕರಿಸಿದರು.
ಶಿಕ್ಷಕಿಯರಾದ ಚೈತ್ರ, ತನುಶ್ರೀ, ಹರ್ಷಿತಾ ಹಾಗೂ ವಿಜಯಾ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಆಟಿ ಕೂಟವು ತುಳುನಾಡಿನ ಸಾಂಪ್ರದಾಯಿಕ ಸಂಸ್ಕೃತಿ ಮತ್ತು ಆಹಾರ ಪದ್ಧತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಮೂಲಕ ಅರ್ಥಪೂರ್ಣವಾಗಿ ನೆರವೇರಿತು.
















