ಕಾರ್ಕಳ: ಸಾಣೂರಿನ ಮನೆಯೊಂದರಲ್ಲಿ ವೇಶ್ಯಾವಟಿಕೆ ದಂಧೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಪೈಕಿ ಮೂರನೇ ಆರೋಪಿ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸರಕಾರಿ ಶಾಲೆಯೊಂದರ ಶಿಕ್ಷಕಿ ಎಂಬ ಅಘಾತಕಾರಿ ಮಾಹಿತಿ ಹೊರಬಿದ್ದಿದೆ. ಸಾಣೂರು ಗ್ರಾಮದ ಅವಿನಾಶ್ ಕಂಪೌಂಡ್ ನ ಪ್ರಮೀಳಾ ವಿಜಯಕುಮಾರ್ ಜೈನ್ ಎಂಬಾಕೆಗೆ ಸೇರಿದ ಮನೆಯಲ್ಲಿ ಕಳೆದ ಕೆಲ ವರ್ಷಗಳಿಂದ ನಿರಂತರವಾಗಿ ವೇಶ್ಯಾವಟಿಕೆ ದಂಧೆ ನಡೆಯುತ್ತಿತ್ತು ಎಂದು ಸಾರ್ವಜನಿಕರು ಆರೋಪಿಸಿದ್ದರು. ಖಚಿತ ವರ್ತಮಾನದ ಮೇರೆಗೆ ಪ್ರಭಾರ ಎಎಸ್ಪಿ ಜಯಶ್ರೀ ಎಸ್.ಮಾನೆ ಅವರ ನೇತೃತ್ವದಲ್ಲಿ ಪೊಲೀಸರ ತಂಡವರು ಸಪ್ಟೆಂಬರ್ 9 ರಂದು ರಾತ್ರಿ ಹಠಾತ್ ಕಾರ್ಯಚರಣೆ ನಡೆಸಿದಾಗ ವೇಶ್ಯಾವಾಟಿಕೆ ಕೃತ್ಯ ಬಳಕಿಗೆ ಬಂದಿದೆ. ಸಂತಸ್ಥೆ ಯುವತಿಯೊಬ್ಬಳನ್ನು ಇದೇ ಸಂದರ್ಭದಲ್ಲಿ ರಕ್ಷಿಸಲಾಗಿದೆ.
ಘಟನಾ ಸ್ಥಳದಿಂದ ನಗದು, ಉಪಯೋಗಿಸಿದ ಕಾಂಡೋಮ್, ಕಾರಿನಲ್ಲಿ ಉಪಯೋಗ ಮಾಡದೇ ಇದ್ದ ಕಾಂಡೋಮ್ ಹಾಗೂ ಒಂದು ಬೆಡ್ ಶೀಟ್ ನ್ನು ಪೊಲೀಸರು ಸ್ವಾಧೀನ ಪಡಿಸಿದ್ದಾರೆ.
A1 ಆರೋಪಿ ಭರತ್ ಜೈನ್ ನಾರಾವಿ ಅಲಿಯಾಸ್ ಭರತ್ ಶೆಟ್ಟಿ, A2 ಆರೋಪಿ ಉಳ್ಳಾಲದ ಸಂಪತ್ ಯುವತಿ,ಮಹಿಳೆಯರನ್ನು ತನ್ನ ಗಾಳಕ್ಕೆ ಬಳಸಿ ವೇಶ್ಯಾವಾಟಿಕೆಗೆ ಸರಬರಾಜು ಮಾಡುತ್ತಿದ್ದನೆಂಬ ಮಾಹಿತಿ ಲಭಿಸಿದೆ. ಮೂರನೇ ಆರೋಪಿ ಈದು ಪ್ರಮೀಳಾ ಹೊಸ್ಮಾರು ಸರಕಾರಿ ಶಾಲೆಯೊಂದರಲ್ಲಿ
ಶಿಕ್ಷಕಿಯಾಗಿದ್ದು, ಪತಿ ಈದು ಗ್ರಾಮ ಪಂಚಾಯತ್‌ನ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ ರಾಜಕೀಯ ದುರೀಣ ಎಂಬ ಮಾಹಿತಿ ತಿಳಿದುಬಂದಿದೆ. ಪ್ರಮುಖ ಆರೋಪಿ ನಾರಾವಿಯ ಭರತ್ ಜೈನ್ ಆಲಿಯಾಸ್ ಭರತ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ತನಿಖೆ ಪ್ರಗತಿಯಲ್ಲಿದ್ದು, ಪ್ರಕರಣದಲ್ಲಿ ಇತರರು ಭಾಗಿಯಾಗಿರುವ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಪ್ರಭಾರ ಎಎಸ್ಪಿ ಜಯಶ್ರೀ ಎಸ್.ಮಾನೆ ಅವರ ನೇತೃತ್ವದಲ್ಲಿ ಪೊಲೀಸರ ತಂಡದವರ ಕಾರ್ಯಚರಣೆಗೆ ವ್ಯಾಪಕ ಪ್ರಶಂಸೆ ವ್ಯಕ್ತಗೊಂಡಿದೆ.















