Coastal Bulletin

ಬಂಟ್ವಾಳ: ಪಕ್ಷದ ಸೂಚನೆಯಂತೆ ನನ್ನನ್ನು 3ನೇ ಭಾರಿ ಅಭ್ಯರ್ಥಿಯಾಗಿ ಅವಕಾಶ ಮಾಡಿಕೊಟ್ಟು,ಆಯ್ಕೆ ಮಾಡಿದ್ದು ಎ.15 ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಪಾದಯಾತ್ರೆಯ ಮೂಲಕ ಬಿಸಿರೋಡು ವರೆಗೆ ಕಾರ್ಯಕರ್ತರೊಂದಿಗೆ ಬಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಬಂಟ್ವಾಳ ಕ್ಷೇತ್ರದ ಅಭ್ಯರ್ಥಿ ಶಾಸಕ ರಾಜೇಶ್ ನಾಯ್ಕ್ ಅವರು ತಿಳಿಸಿದರು.

ಬಿಸಿರೋಡಿನ ಪಕ್ಷದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಆವರು ತಿಳಿಸಿ ಬೆಳಿಗ್ಗೆ 8 ಗಂಟೆಗೆ ದೇವಿಗೆ ಪೂಜೆ ಸಲ್ಲಿಸಿ ಬಳಿಕ 8.30 ಕ್ಕೆ ಕಾರ್ಯಕರ್ತರ ಜೊತೆ ಹೊರಡಲಿದ್ದೇವೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ದನಾಗಿದ್ದು,ಪಕ್ಷದ ಸೂಚನೆಯಂತೆ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಎ.15 ರ ವಿಷು ಹಬ್ಬದ ದಿನವಾದ ಶನಿವಾರ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಅವರು ತಿಳಿಸಿದರು.

ಕ್ಷೇತ್ರದ ಜನರಿಗೆ ಶಾಂತಿ ನೆಮ್ಮದಿಯ ಸಮೃದ್ದಿಯ ಬಂಟ್ವಾಳ ಬೇಕಾಗಿದೆ, ಹಾಗಾಗಿ ಕೇಂದ್ರ ,ರಾಜ್ಯದ ಯೋಜನೆಗಳು ಮತ್ತು ಅಭಿವೃದ್ಧಿ ಜೊತೆಗೆ ಶಾಂತಿಯ ಬಂಟ್ವಾಳವನ್ನು ಉಳಿಸಿಕೊಳ್ಳಲು ಮತ್ತೆ ಬಿಜೆಪಿಗೆ ಬೆಂಬಲ ನೀಡುತ್ತಾರೆ,

ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತಕ್ಕೆ ಬರುತ್ತದೆ ಎಂದು ಅವರು ತಿಳಿಸಿದರು.

ದೇವಪ್ಪ ಪೂಜಾರಿ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಲೇ ಮುಂದಿನ ಚುನಾವಣೆಗೆ ಸಹಾಯವಾಗಲಿದೆ, ಕ್ಷೇತ್ರದ ಉದ್ದಗಲಕ್ಕೂ ಸಂಚರಿಸಿ ಕ್ಷೇತ್ರದ ಮತದಾರರ ಕಷ್ಟಸುಖಗಳಿಗೆ ಸ್ಪಂದಿಸಿದ್ದಾರೆ. 2023 ರ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸುವುದು ನಿಶ್ಚಿತ, ಆದರೆ 30 ಸಾವಿರ ಅಂತರಗಳಿಂದ ಗೆಲುವು ಸಾಧಿಸಬೇಕು ಎಂಬುದು ಬಿಜೆಪಿ ಕಾರ್ಯಕರ್ತರ ಯೋಚನೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಭಾರಿ ರವಿಶಂಕರ್ ಮಿಜಾರು, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರ. ಕಾರ್ಯದರ್ಶಿ ಡೊಂಬಯ್ಯ ಅರಳ ಉಪಸ್ಥಿತರಿದ್ದರು.

Leave a Comment