ಅಹಮದಾಬಾದ್‌ನಲ್ಲಿ ಏ‌ರ್ ಇಂಡಿಯಾದ ಪ್ರಯಾಣಿಕ ವಿಮಾನ ಪತನ.

Coastal Bulletin
ಅಹಮದಾಬಾದ್‌ನಲ್ಲಿ ಏ‌ರ್ ಇಂಡಿಯಾದ ಪ್ರಯಾಣಿಕ ವಿಮಾನ ಪತನ.

ಗುಜರಾತ್‌ನ ಅಹಮದಾಬಾದ್‌ನಲ್ಲಿ ಇಂದು ಮದ್ಯಾಹ್ನ ಏ‌ರ್ ಇಂಡಿಯಾದ ಪ್ರಯಾಣಿಕ ವಿಮಾನ ಬೋಯಿಂಗ್ 737 ಅಪಘಾತಕ್ಕೀಡಾಗಿದ್ದು,ಟೇಕ್ ಅಪ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.

ಅಹಮದಾಬಾದ್‌ನ ಮೇಘನಿನಗರ ಪ್ರದೇಶದಲ್ಲಿ ಬೃಹತ್ ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡವು. ಅದೇ ಸಮಯದಲ್ಲಿ, ದೂರದಿಂದ ಕಪ್ಪು ಹೊಗೆ ಕಾಣಿಸುತ್ತಿದೆ. ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್ರಿಕ್ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 1:10 ಕ್ಕೆ ಹೊರಟಿದ್ದ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನವಾಗಿದೆ.

ಪತನವಾದ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಸಭಾ ಸದಸ್ಯ ವಿಜಯ್ ರೂಪಾನಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಅವರು ಲಂಡನ್ ನಲ್ಲಿ ನೆಲೆಸಿರುವ ತಮ್ಮ ಮಗಳನ್ನು ಭೇಟಿಯಾಗಲು

ತೆರಳುತ್ತಿದ್ದರು ಎನ್ನಲಾಗಿದೆ.

ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ ಎಂದು ಗುಜರಾತ್‌ ಪೊಲೀಸ್‌ ನಿಯಂತ್ರಣ ಕೊಠಡಿ ದೃಢಪಡಿಸಿದೆ. ಬೋಯಿಂಗ್ 787-8 ಗ್ರೀಮ್‌ಲೈನ‌ರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ದಿತ್ತು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ದುರಂತ ಅಪಘಾತ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ. ಆದಾಗ್ಯೂ, ವಿಮಾನ ನಿಲ್ದಾಣದ ಗಡಿಯ ಬಳಿ ವಿಮಾನ ಅಪಘಾತಕ್ಕೀಡಾಗಿದೆ ಎಂದು ನಂಬಲಾಗಿದೆ. ಸಾವು ನೋವಿನ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ.

Leave a Comment