ಮಂಗಳೂರು : ರಾಜ್ಯದಲ್ಲಿ ಆಗಸ್ಟ್ 23 ರಿಂದ 9 ರಿಂದ 12 ನೇ ತರಗತಿವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲು ನಿರ್ಧಾರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಆಗಸ್ಟ್ 23 ರಿಂದ 9 ರಿಂದ 12 ತರಗತಿವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು. ಮೊದಲು ಬ್ಯಾಚ್ ವೈಸ್ ತರಗತಿ ಆರಂಭಕ್ಕೆ ನಿರ್ಧರಿಸಲಾಗಿದ್ದು, ಇದನ್ನು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕೊರೊನಾ ಕಾರಣಕ್ಕೆ ಕಳೆದೆರಡು
ವರ್ಷಗಳ ಕಾಲ ಶಾಲಾ-ಕಾಲೇಜುಗಳು ಬಂದ್ ಆಗಿದ್ದವರು. ಕೇವಲ್ ಆನ್ ಲೈನ್ ಕ್ಲಾಸ್ ನಲ್ಲಿದ್ದ ವಿದ್ಯಾರ್ಥಿಗಳಿಗೆ ಮತ್ತೆ ಶಾಲೆ-ಕಾಲೇಜು ಮೆಟ್ಟಿಲು ಹತ್ತೋ ಭಾಗ್ಯ ಸಿಕ್ಕಿದೆ. ತಜ್ಞರ ಎಚ್ಚರಿಕೆ ನಡುವೆ ಆಗಸ್ಟ್ 23 ರಿಂದ 9-12 ನೇ ತರಗತಿಗಳ ಆರಂಭಕ್ಕೆ ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ















