ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಮಾಡಿದ ಭೀಕರ ಘಟನೆ ನಡೆದಿದೆ.ಮೃತರನ್ನು ಹಸೀನಾ(46),ಅಫ್ನಾನ್(23),ಅಯ್ನಾಝ್(21) ಹಾಗೂ ಆಸಿಂ(12) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ತಲೆಯಲ್ಲಿ ಕೂದಲಿಲ್ಲದ ಓರ್ವ ವ್ಯಕ್ತಿ ಮನೆಗೆ ಬಂದು ಚೂರಿದ ಇರಿದು ಕೊಲೆ ಮಾಡಲಾಗಿದೆ ಎಂದು
ಸ್ಥಳೀಯರು ತಿಳಿಸಿದ್ದಾರೆ.
ಘಟನೆಯಲ್ಲಿ ಹಸೀನ ಅವರ ತಾಯಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ,ಮೃತರ ಪರಿಚಯಸ್ಥನೇ ಕೊಲೆ ಮಾಡಿರುವುದಾಗಿ ಮೇಲ್ನೋಟಕ್ಕೆ ಕಂಡುಬಂದಿದೆ.















