Coastal Bulletin

ಸುಳ್ಯ : ಮದುವೆಗೆ ಹೋಗುತ್ತಿದ್ದ ಕಾರು ಪಲ್ಡಿಯಾಗಿ ತಾಯಿ ಮಗು ಮೃತಪಟ್ಟ ಘಟನೆ ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ನಡೆದಿದೆ.

ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ ಶಾಹಿನಾ (28) ಹಾಗೂ ಮಗು ಶಝಾ (3) ಮೃತ ದುರ್ದೈವಿಗಳು.

ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು,ಅವರನ್ನು ಮಂಗಳೂರಿನ ಖಾಸಗಿ

ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Comment