ಮೊಗರ್ನಾಡು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ.

Coastal Bulletin
ಮೊಗರ್ನಾಡು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ.

ಬಂಟ್ವಾಳ ಡಿ.12, ವಿದ್ಯೆ ಇದ್ದರೆ ಸಾಲದು ವಿನಯ, ತಾಳ್ಮೆ,ಉತ್ತಮ ಸಂಸ್ಕಾರವಿದ್ದರೆ ಮಾತ್ರ ಒಳ್ಳೆಯ ವ್ಯಕ್ತಿಯಾಗಿರಬಹುದು. ತುಳುನಾಡಿನ ಸಂಸ್ಕೃತಿ ಕಟ್ಟುಪಾಡುಗಳಿಗೆ ತನ್ನದೇ ಆದ ಸ್ಥಾನಮಾನವಿದೆ, ಅದನ್ನು ಯಾರು ಬದಲಾಯಿಸಲು ಹೋಗಬಾರದು.ಪಾಶ್ಚಾತ್ಯ ಸಂಸ್ಕ್ರತಿಗೆ ಮಾರುಹೋಗದೆ ನಮ್ಮ‌ ತುಳುನಾಡಿನ ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸೋಣ, ಪೂಜ್ಯ ಖಾವಂದರ ದುಶ್ಚಟಮುಕ್ತ ಸಮಾಜ ನಿರ್ಮಾಣದ ಕನಸನ್ನು ನನಸು ಮಾಡೋಣ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾದ ತುಳುವ ಬೊಳ್ಳಿ ದಯಾನಂದ ಜಿ ಕತ್ತಲ್ ಸಾರ್ . ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಪ್ರಗತಿಬಂದು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯದ ವತಿಯಿಂದ ಅನ್ನಪೂರ್ಣ ಸಭಾಭವನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನ ಮೊಗರ್ನಾಡು,ನರಿಕೊಂಬು ಇಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಸ್ವೀಕರಿಸಿ ಸಭೆಯನ್ನುಉದ್ದೇಶಸಿಸಿ ಮಾತನಾಡಿದರು.

ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶಂಬೂರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಶ್ರೀ ಕ್ಷೇತ್ರದಿಂದ ಗ್ರಾಮದ ಶಾಲೆ, ದೈವಸ್ಥಾನ ಗಳ ಅಭಿವೃದ್ಧಿಗೆ ಉತ್ತಮ ಮಟ್ಟದ ಅನುದಾನ ಒದಗಿಸಿದ್ದು ಹಾಗೂ ಆಸಕ್ತರಿಗೆ ನೆರವು, ಮಾಶಾಸನ, ಸುಜ್ಞಾನ ನಿಧಿ, ಸುರಕ್ಷಾ ನೀಡುವುದರ ಮೂಲಕ ಗ್ರಾಮದ ಅಭಿವೃದ್ಧಿಯಲ್ಲಿ ಮಹತ್ವ ಪಾತ್ರ ವಹಿಸಿರುವ ಯೋಜನೆಯ ಎಲ್ಲಾ ಕಾರ್ಯಕ್ರಮಗಳಿಗೆ ಪಂಚಾಯತಿ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಜನಜಾಗೃತಿ ವೇದಿಕೆ ಬಂಟ್ವಾಳದ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಕಾರಂತ್ ನರಿಕೊಂಬು, ಭಜನ ಸಂಕೀರ್ತನ ಕಾರ್ಯಕ್ರಮವನ್ನು ಉದ್ಘಾಟಿಸಿ ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗದೆ ನಮ್ಮ ಸಂಸ್ಕೃತಿಯ ಭಜನಾ ಸಂಕೀರ್ತನ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಮಾಡಿದಂತ ಧಾರ್ಮಿಕ ಕಾರ್ಯಕ್ರಮ ಅರ್ಥಪೂರ್ಣ ವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಜನಜಾಗೃತಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ಯೋಜನಾಧಿಕಾರಿ ಸುಧಾ ಜೋಶಿ, ಕರ್ನಾಟಕ ತೆಂಗು ಉತ್ಪಾದಕರ

ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಪ್ರೇಮನಾಥ ಶೆಟ್ಟಿ, ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ, ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್(ರೀ) ಮಾರುತಿನಗರದ ಅಧ್ಯಕ್ಷರಾದ ಚಂದ್ರಸ್ ಕೋಡಿಮಜಲು,ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯದ ಅಧ್ಯಕ್ಷ ಲೀಡಿಯ ಪಿಂಟೋ, ನರಿ ಕೊಂಬು ಎ, ಬಿ ಒಕ್ಕೂಟಗಳ ಅಧ್ಯಕ್ಷರುಗಳಾದ ಕೃಷ್ಣಪ್ಪ ಸಪಲ್ಯ, ಜಯಂತ, ಮೊದಲಾದವರು ಉಪಸ್ಥಿತರಿದ್ದರು , ಸಭಾ ಕಾರ್ಯಕ್ರಮದ ಬಳಿಕ ಭಜನಾ ಶಿಕ್ಷಕ ಗಣೇಶ್ ನೇತೃತ್ವದಲ್ಲಿ ಕುಣಿತ ಬಜನಾ ತಂಡಗಳಾದ ಶ್ರೀ ರಾಮಾಂಜನೇಯ ಭಜನಾ ಮಂಡಳಿ ಶಂಬುರು, ಓಂ ಶ್ರೀ ಭಜನಾ ಮಂಡಳಿ ನಾಯಿಲ, ಶ್ರೀ ವಿನಾಯಕ ಭಜನಾ ಮಂಡಳಿ ದೋಟ. ಕೆದ್ದೇಲ್, ತಂಡಗಳಿಂದ ಭಜನಾ ಸಂಕೀರ್ತನ ಕಾರ್ಯಕ್ರಮ ನೆರವೇರಿತು.

ಸೇವಾ ಪ್ರತಿನಿಧಿಗಳಾದ ಅಮಿತಾ, ವನಿತಾ, ಅನಿತಾ,ಮಲ್ಲಿಕಾ, ಬಬಿತಾ ಪ್ರಾರ್ಥಿಸಿ, ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ವಾಸ್ತವೀಕದೊಂದಿಗೆ ಸಾಗತಿಸಿ, ಸೇವಾ ಪ್ರತಿನಿಧಿ ಕುಸುಮಾವತಿ ವಂದಿಸಿದರು. ಸಂದೀಪ್ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಪ್ರತಿಭಾ ವಸಂತ್ ಸಹಕರಿಸಿದರು.

Leave a Comment