ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ.

Coastal Bulletin
ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ.

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಪ್ರಗತಿ -ಬಂದು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯ ಹಾಗೂ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಇವರ ಸಹಯೋಗದೊಂದಿಗೆ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಜರಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಜಯರಾಮ ಪೂಜಾರಿ ನಿವೃತ್ತ ಆರೋಗ್ಯ ಮೇಲ್ವಿಚಾರಕರು ಮಕ್ಕಳಲ್ಲಿ ಶಿಸ್ತು, ದುಶ್ಚಟದಿಂದಾಗುವ ದುಷ್ಪರಿಣಾಮ ,ಹಿರಿಯರಿಗೆ ತಂದೆ -ತಾಯಿ, ಗುರುಗಳಿಗೆ ಕೊಡುವ ಗೌರವ, ಸಂಸ್ಕೃತಿ ಸಂಸ್ಕಾರ , ಉತ್ತಮ ಆಚಾರ ವಿಚಾರಗಳ ಅಳವಡಿಕೆ ಬಗ್ಗೆ, ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲರಾದ ಸುಬ್ರಮಣ್ಯ ಭಟ್ ವಿ ,

ಕಳ್ಳಿಗೆ ಒಕ್ಕೂಟದ ಅಧ್ಯಕ್ಷರಾದ ಜಯಂತ, ತುಂಬೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ, ಶ್ರೀಮತಿ ಅನಿತಾ ಉಪಸ್ಥಿತರಿದ್ದರು

 ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಕಾರ್ಯಕ್ರಮದ ಪ್ರಸ್ತಾವಿಕ ಮಾಡಿ,ಕಾಲೇಜಿನ ದೈಹಿಕ ಶಿಕ್ಷಣದ ನಿರ್ದೇಶಕರಾದ ಸಾಯಿ ರಾಮ್ ನಾಯ್ಕ್ ರವರು ಸ್ವಾಗತಿಸಿ, ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕರಾದ ಆನಂದ ವಂದಿಸಿದರು.

Leave a Comment