Coastal Bulletin

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ, ಜ| ಕೆ.ಎಸ್. ಹೆಗ್ಡೆ ಚ್ಯಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ರೋಟರಿ ಕ್ಲಬ್ ಫರಂಗಿಪೇಟೆ ಇದರ ಸಹಯೋಗದೊಂದಿಗೆ ದಿ. ಸರಸ್ವತಿ ಕೆ. ಪೂಂಜ ಮತ್ತು ಕೆ. ಕಾಂತಪ್ಪ ಪೂಂಜ ಫರಂಗಿಪೇಟೆ ಇವರ ಸ್ಮರಣಾರ್ಥ ಉಚಿತ ಹೃದಯ ತಪಾಸಣಾ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಗುರುವಾರ ನಡೆಯಿತು. ರೋಟರಿ ಕ್ಲಬ್‌ನ ನಿಯೋಜಿತ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಕಾರ್ಯಕ್ರಮ ಉದ್ಗಾಟಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಶುಭ ಹಾರೈಸಿದರು. ಸೇವಾಂಜಲಿ ಪ್ರತಿಷ್ಠಾನದ ಅಧ್ಯಕ್ಷ ಅಧ್ಯಕ್ಷ ಅರ್ಕುಳ ಬೀಡು ವಜ್ರನಾಭ ಶೆಟ್ಟಿ, ಮೇರಮಜಲು ಗ್ರಾ.ಪಂ. ಸದಸ್ಯೆ ವೃಂದಾ ಪೂಜಾರಿ, ಸೇವಾಂಜಲಿ ಟ್ರಸ್ಟಿ ನಾರಾಯಣ ಬೆಳ್ಚಾಡ ಬಡ್ಡೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯದ ಮೇಲ್ವಿಚಾರಕಿ ಮಮತಾ, ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯ ಡಾ. ಚೇತನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೋಟರಿ ಕ್ಲಬ್

ಫರಂಗಿಪೇಟೆಯ ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಪ್ರಮುಖರಾದ ವಿಕ್ರಂ ಬರ್ಕೆ, ಪ್ರಶಾಂತ್ ತುಂಬೆ, ಎಂ.ಕೆ.ಖಾದರ್ 

ನವೀನ್ ಶೆಟ್ಟಿ ಸುಜೀರು, ಮೋಹನ್ ಸಾಲ್ಯಾನ್ ಬೆಂಜನಪದವು, ಕೃಷ್ಣಪ್ಪ ದೋಟ ಮತ್ತಿತರರು ಹಾಜರಿದ್ದರು. 

ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು. ಟ್ರಸ್ಟಿ ದೇವದಾಸ್ ಶೆಟ್ಟಿ ಕೊಡ್ಮಾಣ್ ಕಾರ್ಯಕ್ರಮ ನಿರೂಪಿಸಿದರು. ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಶಿಬಿರದಲ್ಲಿ ಪಾಲ್ಗೊಂಡು ತಜ್ಞ ವೈದ್ಯರಿಂದ ಉಚಿತವಾಗಿ ಹೃದಯ ತಪಾಸಣೆ, ಇಸಿಜಿ, ಮಧುಮೇಹ ರೋಗ ಪತ್ತೆ, ರಕ್ತದೊತ್ತಡ ಪರೀಕ್ಷೆ ಮಾಡಿಸಿಕೊಂಡರು.

Leave a Comment