ಬಂಟ್ವಾಳ :ಜ.12 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ - 2 ಇವರ ಸಹಯೋಗದಲ್ಲಿ" ಜಲ್ ಜೀವನ್ ಮಿಷನ್ " ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮ ಪಂಚಾಯತ್ ನಲ್ಲಿ ನೀರಿನ ಗುಣಮಟ್ಟ ಪರೀಕ್ಷಾ ತರಬೇತಿಯನ್ನು ಆಯೊಜಿಸಲಾಗಿತ್ತು.
ಈ ತರಬೇತಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ , ಉಪಾಧ್ಯಕ್ಷ ಸದಾಶಿವ ಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಷುಷ್ಪಾ ಎಂ, ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು , ಹಾಗು
ಪಂಚಾಯತ್ ಸಿಬ್ಬಂದಿಗಳು ಸೇರಿ ಒಟ್ಟು ೧೪ ಮಂದಿ ಜನರು ಭಾಗವಹಿಸಿದ್ದರು.
ತರಬೇತಿಯನ್ನು ಜಲ ಜೀವನ್ ಮಿಷನ್ ಬಂಟ್ವಾಳ ತಾಲೂಕಿನ ಸಮುದಾಯ ಸಂಘಟಕರಾದ ಗುಣವತಿಯವರು ಪ್ರಸ್ತಾವಿಕವಾಗಿ ಮಾತನಾಡಿ, ತರಭೇತಿಯನ್ನು ನೇರವೇರಿಸಿದರು. ಚಂದ್ರಶೇಖರವರು ಆಯೋಜಿಸಿ ಯಶಸ್ವಿಗೊಳಿಸಿದರು.














