ಬಂಟ್ವಾಳ: ಹಳೇ ವಿದ್ಯಾರ್ಥಿ ಸಂಘ, ಕೊಡ್ಮಾಣ್ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಮತ್ತು ದ. ಕ. ಜಿ. ಪಂ. ಪ್ರೌಢಶಾಲೆ, ಕೊಡ್ಮಾಣ್ ಇದರ 46ನೇ ವರ್ಷದ ವಾರ್ಷಿಕೋತ್ಸವವು ಫೆ. 14ರಂದು ಶನಿವಾರ ಶಾಲಾ ವಠಾರದಲ್ಲಿ ನಡೆಯಲಿದೆ.
ಅಂದು ಸಂಜೆ 4ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಗಂಟೆ 5-30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಸಂಜೆ 6ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಹಳೇ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿ ಜರುಗಲಿದೆ.
ರಾತ್ರಿ ಗಂಟೆ 8-00ರಿಂದ
ವಾರ್ಷಿಕೋತ್ಸವ ಸಮಾರಂಭ ನಡೆಯಲಿದ್ದು, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ ಸಹಿತ ಅನೇಕ ಗಣ್ಯರು ಉಪಸ್ಥಿತರಿರುವರು.
ಬಳಿಕ ತೆಲಿಕೆದ ಕಲಾವಿದೆರ್ ಕೊಯ್ಲ ಅಭಿನಯದ ಪಂಡ ಕೇನುಜೆರ್ ಎಂಬ ತುಳು ಸಾಮಾಜಿಕ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.















